ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಮತ್ತು ಸಚಿವರ ನೇಮಕಾತಿ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾಮಾಜಿಕ ಮಾಧ್ಯಮ X ನಲ್ಲಿ ವಾಕ್ಸಮರ ನಡೆದಿದೆ. ರಾಜ್ಯದ 20 ಇಲಾಖೆಗಳಿಗೆ ಇನ್ನೂ ಸಚಿವರನ್ನು ನೇಮಕ ಮಾಡಿಲ್ಲ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ…
ಬಿಡದಿ ಟೌನ್ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕಮೀಷನ್ ಮಿನಿಸ್ಟರ್ ಎಂದಿರುವ ಪ್ರತಿಪಕ್ಷ ನಾಯಕ ಡಿ.ಕೆ.ಶಿವಕುಮಾರ್, ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ, ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಹೊರಟಿರುವ ಅವರೇ, ಅನ್ನದಾತರಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆ ಎಂದು ಎಚ್ಚರಿಕೆ…
ಬಿಡದಿ ಟೌನ್ಶಿಪ್ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ
ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಎಂದು ಬಿಂಬಿಸಲಾಗಿರುವ ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವುದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು…
ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಯೋಜನೆಗಳ ದುರ್ಬಳಕೆಯನ್ನು ತಡೆಗಟ್ಟುವುದು ಹಾಗೂ ನೈಜ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಈ ನಿರ್ಧಾರ…
₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ
ಬೆಂಗಳೂರು: ಸುಮಾರು ₹39,000 ಕೋಟಿ ಮೌಲ್ಯದ ಘನತ್ಯಾಜ್ಯ ನಿರ್ವಹಣಾ ಟೆಂಡರ್ನ್ನು ಕರ್ನಾಟಕ ಕಂಡ ಅತಿದೊಡ್ಡ ಹಗರಣಗಳಲ್ಲಿ ಒಂದೆಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಶೀಘ್ರದಲ್ಲೇ ದಾಖಲೆಗಳನ್ನು…
ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು
ಬೆಂಗಳೂರು: 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲೊಬ್ಬರಾಗಿದ್ದ ಅಬ್ದುಲ್ ಖಾದರ್ (60) ಅವರು ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಡಿಕೇರಿ ಜಿಲ್ಲೆಯ ವಿರಾಜಪೇಟೆ ಮೂಲದ ಅಬ್ದುಲ್ ಖಾದರ್ ಅವರನ್ನು 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ…
ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್ಗಳು, ಯುನಿಸೆಕ್ಸ್ ಸಲೂನ್ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಮಂಗಳೂರಿನ ಮಾಜಿ ಸರ್ಕಾರಿ…
ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ…
ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ.…
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ನೀಡಲಾದ ಅನುದಾನದಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿರುವುದು ಉದ್ದೇಶಪೂರ್ವಕವಲ್ಲ, ಆ ಸಮುದಾಯದಿಂದ ಹೆಚ್ಚಿನ…