ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ
ಹನೂರು : ಮಾನಸ ಶಿಕ್ಷಣ ಸಂಸ್ಥೆಯು 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾನಸ ಶಿಕ್ಷಣ ಸಂಸ್ಥೆ ಮತ್ತು ಮಾನಸ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆ.22 ರಂದು ಪಟ್ಟಣದ ಗೌರಿ ಶಂಕರ್ ಕಲ್ಯಾಣ ಮಂಟಪವನ್ನು ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿಗಳಾದ ಡಾ ದತ್ತೇಶ್ ಕುಮಾರ್ ಅವರು…
ಕಾಂಗ್ರೆಸ್ಗೆ ಶಾಕ್: ಮಾಜಿ ಪಾಲಿಕೆ ಸದಸ್ಯರು ಸೇರಿ ಮೂವರು ಬಿಜೆಪಿ ಸೇರ್ಪಡೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ನಾರಾಯಣ್, ಸುರೇಶ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.…
ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ
ಹನೂರು: ತಾಲ್ಲೂಕಿನಲ್ಲಿ ದಿನಾಂಕ 14.08.1992 ಮಿಣ್ಯ ದಾಳಿಯಲ್ಲಿ ವೀರಪ್ಪನ್ ನಿಂದ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಮಾಡಲಾಯಿತು. ದಾಳಿಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳಿಗೆ ರಾಮಾಪರ ವೃತ್ತ ನಿರೀಕ್ಷಕರಾದ ಚಿಕ್ಕರಂಗ ಶೆಟ್ಟಿ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್…
ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಯಾಗಿ ಕಾಂಗ್ರೆಸ್ ಸದಸ್ಯ ಸಲೀಂ ಅಹ್ಮದ್ ಶುಕ್ರವಾರ ಆಯ್ಕೆಯಾಗಿದ್ದಾರೆ. ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಧ್ವನಿಮತದ ಮೂಲಕ ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಪರವಾಗಿ 38 ಸದಸ್ಯರು ಬೆಂಬಲ…
ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ‘ಶ್ಲಾಘನೀಯ ಸೇವಾ ಪದಕ’ ಲಭಿಸಿದೆ.…
ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ
ಚಾಮರಾಜನಗರ : ಶ್ರಾವಣ ಮಾಸ ಪ್ರಾರಂಭವಾದ ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಮಹೋತ್ಸವವು ಭಕ್ತಿ, ವೈಭವದಿಂದ ನೆರವೇರಿತು. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪಟ್ಟದ ಡಾ. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ…
ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣ ಸಾಮಾನ್ಯ ಸೆಲ್ಗೆ ಸ್ಥಳಾಂತರ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಐಪಿ ಸೆಲ್ನಿಂದ ಸಾಮಾನ್ಯ ಕೈದಿಗಳ ಸೆಲ್ಗೆ ಸ್ಥಳಾಂತರಿಸಲಾಗಿದೆ. ಜೈಲಿನೊಳಗಿಂದ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿರುವುದಾಗಿ ಹೇಳಲಾದ 17 ಸೆಕೆಂಡುಗಳ…
ಹೆಬ್ಬಾಳ ಶಾರ್ಟ್ ಟನಲ್ ಯೋಜನೆಗೆ ತೇಜಸ್ವಿ ಸೂರ್ಯ ವಿರೋಧ; ವೈಜ್ಞಾನಿಕ ಅಧ್ಯಯನಕ್ಕೆ ಆಗ್ರಹ
ಬೆಂಗಳೂರು: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೆತ್ತಿಕೊಂಡಿರುವ ಹೆಬ್ಬಾಳ ಶಾರ್ಟ್ ಟನಲ್ ಯೋಜನೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಸುಮಾರು ₹1,140 ಕೋಟಿ ಅಂದಾಜು ವೆಚ್ಚದ ಯೋಜನೆಯನ್ನು ವೈಜ್ಞಾನಿಕ ಮೌಲ್ಯಮಾಪನವಿಲ್ಲದೆ…
ಕಾವೇರಿ ನೀರು ವಿವಾದ; ಕರ್ನಾಟಕ ಬಂದ್ಗೆ ನೈತಿಕ ಬೆಂಬಲ, ಹಲವೆಡೆ ಪ್ರತಿಭಟನೆ
ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಗುರುವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಆದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಂದ್ ಹಿನ್ನೆಲೆಯಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು…
ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗ, ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ವೈದ್ಯ
ಬೆಂಗಳೂರು: ಕಾಂಗ್ರೆಸ್ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅವರಿಗೆ ಈ ಜವಾಬ್ದಾರಿ ವಹಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲೂ ಸಚಿವ ಸ್ಥಾನದಿಂದ ವಂಚಿತರಾಗಿದ್ದ ದೇಶಪಾಂಡೆ ಅವರಿಗೆ, ಇದೀಗ…