SIR ಪರಿಶೀಲನೆ ಬಳಿಕ 2.41 ಲಕ್ಷ ಮತದಾರರಿಗೆ ಅನುಕೂಲ; 1.08 ಕೋಟಿ ಹೆಸರುಗಳು ASDDO ಪಟ್ಟಿಯಲ್ಲಿ
ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು, ಮನೆ-ಮನೆ ಮತದಾರರ ಪರಿಶೀಲನೆಯ ಬಳಿಕ 2.41 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಗೈರುಹಾಜರಿ, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತರು, ನಕಲಿ ಹಾಗೂ ಇತರೆ (ASDDO) ವರ್ಗದಿಂದ ಹೊರಗಿಡಲಾಗಿದೆ…
ಇ-ಮೊಬಿಲಿಟಿಗೆ ಸರ್ಕಾರದ ಉತ್ತೇಜನ; 16.72 ಲಕ್ಷ EVಗಳಿಗೆ FAME-II ನೆರವು
ನವದೆಹಲಿ: ದೇಶದಲ್ಲಿ ವಿದ್ಯುತ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು, ಚಾರ್ಜಿಂಗ್ ಮೂಲಸೌಕರ್ಯ ಬಲಪಡಿಸುವುದು ಹಾಗೂ ದೇಶೀಯ ಉತ್ಪಾದನಾ ಸಾಮರ್ಥ್ಯ ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಭಾರೀ ಕೈಗಾರಿಕಾ ಸಚಿವಾಲಯ ತಿಳಿಸಿದೆ. 2019ರ ಏಪ್ರಿಲ್ನಿಂದ 2024ರ…
ಬಿಡದಿ ಟೌನ್ಶಿಪ್ ಜಾರಿಗೆ ರೈತರಿಂದಲೇ ಒತ್ತಡ; ಸಿಎಂಗೆ ಮನವಿ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಯನ್ನು ಜಾರಿಗೊಳಿಸುವುದು ಹಾಗೂ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿ ಆಯಾ ಗ್ರಾಮಗಳ ರೈತರ ನಿಯೋಗ ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿ…
ಆಗಸ್ಟ್ 14ರಂದು ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಆಗಸ್ಟ್ 14ರಂದು ಹೊಸ ಸ್ಪೀಕರ್ ಆಯ್ಕೆ ನಡೆಯಲಿದೆ. ಪ್ರಸ್ತುತ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳು ಖಾಲಿ ಇದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಆಗಸ್ಟ್ 3ರಂದು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದರು.…
ಸಚಿವರಿಗೆ ಖಾತೆ ಹಂಚಿಕೆ: 13 ಮಂದಿಗೆ ಖಾತೆ ಫೈನಲ್, 6 ಮಂದಿಗೆ ಬಾಕಿ
ಬೆಂಗಳೂರು: ಹಲವು ಸುತ್ತಿನ ಸಭೆಗಳ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಯನ್ನು ಸಿದ್ಧಪಡಿಸಿರುವ ಸಿಎಂ, ಅಧಿಕೃತ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪ್ರಮಾಣವಚನ ಸ್ವೀಕರಿಸಿದ…
ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿವಾದ ತಾರಕಕ್ಕೆ; ಡಿಸಿಎಂ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ತುಮಕೂರು: ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿಚಾರದಲ್ಲಿ ತುಮಕೂರಿನಲ್ಲಿ ಪರ-ವಿರೋಧದ ಹೋರಾಟಗಳು ತೀವ್ರಗೊಂಡಿದ್ದು, ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಕಾಮಗಾರಿ ಶೀಘ್ರ ಆರಂಭಿಸುವಂತೆ ಆಗ್ರಹಿಸಿ ಕುಣಿಗಲ್ ಭಾಗದ ರೈತರು ಡಿಸಿಎಂ ಡಾ. ಜಿ. ಪರಮೇಶ್ವರ್ ಅವರ ಕಾರಿಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದರು.…
ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯದ ಚಿಂತನೆ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ತಮಿಳುನಾಡಿಗೆ ಪ್ರತಿದಿನ ಸುಮಾರು 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ…
ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳಿರುವ ಆರೋಪಕ್ಕೆ ಪರಮೇಶ್ವರ್ ತಿರುಗೇಟು; ದಾಖಲೆ ಇದ್ದರೆ ಕ್ರಮ
ತುಮಕೂರು: ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ವಾಸಿಸುತ್ತಿದ್ದಾರೆ, ಬೆಂಗಳೂರಿನಲ್ಲೇ 4.5 ಲಕ್ಷ ಮಂದಿ ಇದ್ದಾರೆ ಎಂಬ ಆರೋಪವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಳ್ಳಿಹಾಕಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಅಂಕಿ-ಅಂಶಗಳಿಗೆ ವಿಶ್ವಾಸಾರ್ಹ ದಾಖಲೆ ಮತ್ತು…
ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ
ವಿಜಯಪುರ: ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಸಚಿವ ಸಂಪುಟದ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ತಪ್ಪಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರಿಗೆ ಖಾತೆ ಹಂಚಿಕೆ…
ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ತಡವಾಗಿ ಚುರುಕುಗೊಂಡಿರುವ ಮುಂಗಾರು ಮಳೆ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ…