ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್ಫೀಲ್ಡ್ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
ಬೆಂಗಳೂರು: ಉದ್ಯಾನ ನಗರಿಯಲ್ಲಿ ರಹಸ್ಯವಾಗಿ ನೆಲೆಯೂರಿರುವ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ ಬೆಂಗಳೂರಿನ ವೈಟ್ಫೀಲ್ಡ್ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್ಫೀಲ್ಡ್ ಉಪವಿಭಾಗದ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಬೆಳ್ಳಂಬೆಳಿಗ್ಗೆ ಅಖಾಡಕ್ಕಿಳಿದಿದ್ದು, ನಿರಾಶ್ರಿತರ ಸೋಗಿನಲ್ಲಿ…
ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ವೊಂದರ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ…
ಸಚಿವರಾದ ನಂತರ ಮೊದಲ ಭೇಟಿ; ಮಂಡ್ಯದಲ್ಲಿ ಚಲುವರಾಯಸ್ವಾಮಿ, ನರೇಂದ್ರಸ್ವಾಮಿಗೆ ಅದ್ಧೂರಿ ಸ್ವಾಗತ
ಮಂಡ್ಯ: ನೂತನ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಶನಿವಾರ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ಗಡಿ ನಿಡಘಟ್ಟದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಮದ್ದೂರು ತಾಲೂಕಿನ ನಿಡಘಟ್ಟ ಬಳಿ ಸಚಿವರಿಬ್ಬರನ್ನು ಮದ್ದೂರು ಶಾಸಕ ಕೆ. ಉದಯ್,…
ಓಣಂ ಪ್ರಯಾಣಿಕರಿಗೆ KSRTCಯಿಂದ ಗುಡ್ನ್ಯೂಸ್; ಆ.21ರಿಂದ 25ರವರೆಗೆ ವಿಶೇಷ ಬಸ್ ಸೇವೆ
ಬೆಂಗಳೂರು: ಆಗಸ್ಟ್ 26ರಂದು ನಡೆಯಲಿರುವ ತಿರು ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್ ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ…
ಮತದಾರರ ಪಟ್ಟಿಯ ಪರಿಷ್ಕರಣೆಗೆ ಮತ್ತಷ್ಟು ಕಾಲಾವಕಾಶ; ಆ.24ರಂದು ಕರಡು ಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಗಡುವನ್ನು ಚುನಾವಣಾ ಆಯೋಗ ಮತ್ತೆ ವಿಸ್ತರಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಮನವಿ ಹಿನ್ನೆಲೆಯಲ್ಲಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲು…
‘ಓಬಿಸಿ, ಜಾತಿ ಜನಗಣತಿ ವರದಿ ಜಾರಿಗೆ ಹೋರಾಟ ಅಗತ್ಯ’; ರಾಷ್ಟ್ರೀಯ ಸಮಾವೇಶದಲ್ಲಿ ಹರಿಪ್ರಸಾದ್ ಕರೆ
ಬೆಂಗಳೂರು: ಮೀಸಲಾತಿ ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ, ಉದ್ಯೋಗ ನೀಡುವ ದಯಾಧರ್ಮವೂ ಅಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದು, ಅಧಿಕಾರದಲ್ಲಿ ಪಾಲು ನೀಡುವ ಸಾಂವಿಧಾನಿಕ ಸಾಧನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ರಾಷ್ಟ್ರೀಯ ಓಬಿಸಿ ಮಹಾಸಂಘದ 11ನೇ…
ಎಸ್ಐಆರ್ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕರ್ನಾಟಕದಲ್ಲಿ ಶೇ.20ರಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ವಿಧಾನ ಪರಿಷತ್ ಸದಸ್ಯ ರಮೇಶ್…
ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಅವರ ಹೆಸರನ್ನು ಸೂಚಿಸಿದ ಬೆನ್ನಲ್ಲೇ ಈ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ.…
ಅಸಮಾಧಾನಿತ ‘ಕೈ’ ಶಾಸಕರ ಮನವೊಲಿಕೆಗೆ ‘ಹೈ’ ಕಸರತ್ತು; ಉತ್ತರಕ್ಕೆ ಅನ್ಯಾಯವಾಗಿದೆ ಎಂದ ನಾಯಕ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಪ್ರಯತ್ನವನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್…
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ
ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆಗಳ ಸರಣಿಯೂ ಆರಂಭವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ,…