Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಕ್ಕಳ ದಿನಾಚರಣೆಯಲ್ಲಿ ರಾಜಕೀಯ ಪ್ರಚಾರ ಆರೋಪ: ಶಾಸಕ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್‌ನಿಂದ ದೂರು

By ANU News
November 18, 2026 1 Min Read
Comments Off on ಮಕ್ಕಳ ದಿನಾಚರಣೆಯಲ್ಲಿ ರಾಜಕೀಯ ಪ್ರಚಾರ ಆರೋಪ: ಶಾಸಕ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್‌ನಿಂದ ದೂರು

ಮಂಗಳೂರು: ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ವೇದಿಕೆಯನ್ನಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಆಡಳಿತಾತ್ಮಕ ವಿಚಾರಣೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ ಆಗ್ರಹಿಸಿದ್ದಾರೆ.

ಈ ಕುರಿತು ಸಮಿತಿಯ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ದರ್ಶನ್ ಅವರನ್ನು ಭೇಟಿ ಮಾಡಿದ ಮನೋರಾಜ್ ರಾಜೀವ ಮನವಿ ಸಲ್ಲಿಸಿದ್ದಾರೆ. ಶಾಲಾ ಮಕ್ಕಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ರಾಜಕೀಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಮಕ್ಕಳಿಗಾಗಿ ಆಯೋಜಿಸುವ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜಕೀಯ ತಟಸ್ಥತೆ, ಶಿಸ್ತು ಹಾಗೂ ಔಚಿತ್ಯ ಕಾಪಾಡಬೇಕು. ಇಂತಹ ಕಾರ್ಯಕ್ರಮಗಳನ್ನು ಪಕ್ಷಪಾತದ ರಾಜಕೀಯ ಪ್ರಚಾರಕ್ಕೆ ಬಳಸಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

 

ಇದಲ್ಲದೆ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಗಿದ್ದು, ಸಂವಿಧಾನದ ಅನುಚ್ಛೇದ 194 ಹಾಗೂ ವಿಧಾನಸಭೆಯ ಕಾರ್ಯವಿಧಾನ ಮತ್ತು ಕಲಾಪಗಳ ನಿರ್ವಹಣಾ ನಿಯಮಾವಳಿಯ ನಿಯಮ 196ರ ಅಡಿಯಲ್ಲಿ ವಿಷಯವನ್ನು ಪರಿಶೀಲಿಸುವಂತೆ ಕೋರಲಾಗಿದೆ. ಅಲ್ಲದೆ, ಮನವಿಯನ್ನು ಸದನದ ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸಿ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿದೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಬಿ.ಕೆ. ಹರಿಪ್ರಸಾದ್ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರಿಗೂ ಮನವಿಗಳ ಪ್ರತಿಗಳನ್ನು ಸಲ್ಲಿಸಲಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೂ ಪ್ರತಿಗಳನ್ನು ರವಾನಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಲಾಗಿದೆ ಎಂದು ಮನೋರಾಜ್ ರಾಜೀವ ತಿಳಿಸಿದ್ದಾರೆ.

Author

ANU News

Follow Me
Other Articles
Previous

Collins Aerospace to invest in first India MRO facility in Karnataka; 2,100 jobs expected

Next

Harish Poonja Row: K’taka Congress Invokes Article 194, Seeks Assembly Privileges Probe

Recent Posts

  • Harish Poonja Row: K’taka Congress Invokes Article 194, Seeks Assembly Privileges Probe
  • ಮಕ್ಕಳ ದಿನಾಚರಣೆಯಲ್ಲಿ ರಾಜಕೀಯ ಪ್ರಚಾರ ಆರೋಪ: ಶಾಸಕ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್‌ನಿಂದ ದೂರು
  • Collins Aerospace to invest in first India MRO facility in Karnataka; 2,100 jobs expected
  • Karnataka Journalists felicitate ‘Rajyotsava’ awardee, photographer Vishwanath Suvarna
  • Karnataka Minister UT Khader Seeks Coordinated Action to Make Educational Institutions Tobacco-Free
Copyright 2026 — ANU News. All rights reserved. Blogsy WordPress Theme