Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಬಡವರ ಪಿಂಚಣಿ ತಕ್ಷಣ ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರ: ಡಾ. ರವಿ ಸಿ.ಟಿ

By ANU News
October 8, 2026 2 Min Read
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ 67 ಸಾವಿರಕ್ಕೂ ಹೆಚ್ಚು ಅಂಗವಿಕಲರು, ವೃದ್ಧರು ಹಾಗೂ ವಿಧವೆಯರಿಗೆ ಕಳೆದ 6–8 ತಿಂಗಳಿಂದ ಸ್ಥಗಿತಗೊಂಡಿರುವ ಪಿಂಚಣಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಡಾ. ರವಿ ಸಿ.ಟಿ. ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪಿಂಚಣಿ ಹಣ ಸ್ಥಗಿತಗೊಂಡಿರುವುದನ್ನು ಖಂಡಿಸಿ ಚಿಕ್ಕಮಗಳೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಮಂಡಲಗಳ ವತಿಯಿಂದ ಬುಧವಾರ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗ ಹಲವು ವಿಧವೆಯರು, ವೃದ್ಧರು ಹಾಗೂ ಅಂಗವಿಕಲರು ಹಲವು ತಿಂಗಳಿಂದ ಪಿಂಚಣಿ ಬಂದಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಪಿಂಚಣಿಯನ್ನೇ ಜೀವನಾಧಾರ ಮಾಡಿಕೊಂಡಿರುವವರಿಗೆ ಹಣ ಸ್ಥಗಿತವಾಗಿರುವುದು ತೀವ್ರ ಸಂಕಷ್ಟ ತಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೋರಾಟಕ್ಕೆ ಇಳಿದಿದೆ ಎಂದು ಹೇಳಿದರು.

ವಿಧಾನಸಭೆಯಲ್ಲಿ ಈ ಕುರಿತು ಪ್ರಶ್ನಿಸಲಾಗಿದೆ. ವಿವಿಧೆಡೆ ಪ್ರತಿಭಟನೆ ನಡೆಸಲಾಗಿದೆ. ಕೆಡಿಪಿ ಸಭೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ಬಾಕಿ ಹಣವನ್ನು ಒಟ್ಟಿಗೆ ಪಾವತಿಸುವ ಭರವಸೆ ನೀಡಲಾಗಿದೆ. ಆದರೆ ಇದುವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.

ಬಡವರ ಮನೆಗಳೂ ಅರ್ಧಕ್ಕೆ

ಆಶ್ರಯ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಮಂಜೂರಾದ ಹಲವು ಮನೆಗಳು ಅರ್ಧಕ್ಕೆ ನಿಂತಿವೆ. ಬಡವರು ಇನ್ನೂ ಮನೆಗಾಗಿ ಕಾಯುವ ಪರಿಸ್ಥಿತಿ ಇದೆ. ಮಂಜೂರಾದ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವುದು ಸರ್ಕಾರದ ಜವಾಬ್ದಾರಿ ಎಂದು ರವಿ ಹೇಳಿದರು.

ಪ್ರಜಾಸೇವೆ ಎಂದರೆ ಕಮಿಷನ್ ಪಡೆಯುವುದಲ್ಲ ಎಂದು ಹೇಳಿದ ಅವರು, ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಸರ್ಕಾರಿ ಸೇವೆಗಳಲ್ಲಿನ ಅಕ್ರಮಗಳ ಕುರಿತು ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಪೂರೈಕೆಯಲ್ಲೂ ಕಮಿಷನ್ ಆರೋಪಗಳು ಕೇಳಿಬರುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದರು.

ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಹಣ ಪಾವತಿಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದ ಅವರು, ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತವಾಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.

“ಬಡವರ ಕಣ್ಣೀರು ಒರೆಸುವ ಶಿವ ಬೇಕು; ಬಡವರ ಕಣ್ಣಲ್ಲಿ ನೀರು ತರಿಸುವ ಶಿವ ಬೇಡ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಹೇಳಿದರು.

ರಾಜ್ಯದ 23 ಲಕ್ಷ ಪಿಂಚಣಿ ಫಲಾನುಭವಿಗಳಿಗೆ ಹಣ ತಲುಪಿಸುವ ಜತೆಗೆ ಬಾಕಿ ಉಳಿದಿರುವ ಗ್ಯಾರಂಟಿ ಯೋಜನೆಗಳ ಹಣವನ್ನೂ ಬಿಡುಗಡೆ ಮಾಡಬೇಕು. ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಉತ್ಸವಗಳಿಗೆ ಹಣ ಖರ್ಚು ಮಾಡುವ ಬದಲು ಬಡವರಿಗೆ ಸೇರಬೇಕಾದ ಹಣಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಪಿಂಚಣಿ ಹಣ ತಕ್ಷಣ ಬಿಡುಗಡೆ ಮಾಡದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರವಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಕನಕರಾಜ್ ಅರಸ್, ಬಿ.ಜಿ. ಸೋಮಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಬೆಳವಾಡಿ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಎನ್. ವಿಜಯ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

Karnataka govt seeks EC nod to hike milk prices; Chaluvarayaswamy says action depends on approval

Next

‘Truth is on our side, no force can break our resolve’: DK Shivakumar

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಖಾರಿಫ್ ಈರುಳ್ಳಿ ಪೂರೈಕೆ ಹೆಚ್ಚಳ: ದೇಶಾದ್ಯಂತ ಬೆಲೆ ಇಳಿಕೆ ನಿರೀಕ್ಷೆ
    • Onion prices ease as fresh Kharif arrivals boost supply across India
    • ಭಾರತ–ಅಮೆರಿಕ ವ್ಯಾಪಾರ, ಹೂಡಿಕೆ ವೃದ್ಧಿಗೆ ಪಿಯೂಷ್ ಗೋಯಲ್ ಸರಣಿ ಸಭೆ
    • Karnataka’s AI education push welcome, but not at cost of third language: Forum
    • ತೃತೀಯ ಭಾಷೆಗೆ AI ಪರ್ಯಾಯ ಬೇಡ: ಭಾಷಾ ಶಿಕ್ಷಣದ ಜತೆ AI ಕಲಿಕೆ ಅಗತ್ಯ; ದೇಶೀಯ ಭಾಷಾ ಹಿತರಕ್ಷಣಾ ವೇದಿಕೆ
    Copyright 2026 — ANU News. All rights reserved. Blogsy WordPress Theme