Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ

By ANU News
July 14, 2026 1 Min Read
0

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯ ಬಳಿಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರೈತರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಸರ್ಕಾರದ ಆದ್ಯತೆ. ಆದರೆ ಈ ವರ್ಷ ನಿರೀಕ್ಷಿತ ಮಳೆಯಾಗದ ಕಾರಣ ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದು, ಕುಡಿಯುವ ನೀರಿನ ಅಗತ್ಯವನ್ನೂ ಗಮನದಲ್ಲಿಟ್ಟುಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಎಲ್ಲ ಶಾಸಕರು ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಿದ್ದು, ದೆಹಲಿಯಲ್ಲಿ ನಡೆಯಲಿರುವ CWMA ಹಾಗೂ CWRC ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.

ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಕುಡಿಯುವ ನೀರಿನ ಅಗತ್ಯ, ಬೆಳೆಗಳ ಸ್ಥಿತಿ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮಂಡಿಸಲಿದ್ದಾರೆ. ಸಭೆಯ ಬಳಿಕ ತಕ್ಷಣವೇ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ನಾಲೆಗಳಿಗೆ ನೀರು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ವ್ಯಕ್ತಪಡಿಸಿರುವುದರಿಂದ ಕೆಆರ್‌ಎಸ್ ಜಲಾಶಯ ತುಂಬುವ ನಿರೀಕ್ಷೆಯಿದೆ. ರೈತರು ಧೃತಿಗೆಡದೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, “ಇದು ರೈತರ ಬದುಕಿನ ಪ್ರಶ್ನೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು” ಎಂದು ಎಲ್ಲಾ ಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.

Author

ANU News

Follow Me
Other Articles
Previous

Karnataka to Set Up India’s First Government-Led AI University, Says D.K. Shivakumar

Next

Decision on Canal Water Release After CWMA Meet, Says Karnataka MLA Chaluvarayaswamy

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Mysuru Ganapathy Sachchidananda Ashram hosts grand Chaturmasya celebrations of Datta Vijayananda Teertha
    • ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ
    • ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ
    • Grandmothers’ Day at Hanur school celebrates special bond between grandparents and grandchildren
    • ‘Annabrahma Chaturmasya’ in Gokarna: Mind, ‘ojas’ vital to keep body functioning, says Raghaveshwara Sri
    Copyright 2026 — ANU News. All rights reserved. Blogsy WordPress Theme