Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕಂಪನಿ-ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.60ರಷ್ಟು ಉದ್ಯೋಗ; ಕಠಿಣ ಕಾನೂನು ಜಾರಿಗೆ ಕುರುಬೂರು ಶಾಂತಕುಮಾರ್ ಒತ್ತಾಯ

By ANU News
November 1, 2026 1 Min Read
Comments Off on ಕಂಪನಿ-ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.60ರಷ್ಟು ಉದ್ಯೋಗ; ಕಠಿಣ ಕಾನೂನು ಜಾರಿಗೆ ಕುರುಬೂರು ಶಾಂತಕುಮಾರ್ ಒತ್ತಾಯ

ಬೆಂಗಳೂರು: ರೈತರ ಬದುಕಿನ ಪ್ರಶ್ನೆಯಾಗಿರುವ ಹಾಲಿನ ಬೆಲೆ ಏರಿಕೆಗೆ ಜನಸಾಮಾನ್ಯರು ಆಕ್ಷೇಪ ವ್ಯಕ್ತಪಡಿಸಬಾರದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ, ಗುರುದೇವ ನಾರಾಯಣ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶು ಆಹಾರ, ರಸಗೊಬ್ಬರ, ಬೀಜ, ಕೀಟನಾಶಕ ಸೇರಿದಂತೆ ಕೃಷಿ ವೆಚ್ಚಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಹೈನುಗಾರಿಕೆ ನಡೆಸುವ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.

ಎಲ್ಲ ವಸ್ತುಗಳ ಬೆಲೆ ಏರಿಕೆಯಾದರೂ ರೈತರ ಉತ್ಪನ್ನಗಳಾದ ಹಾಲು, ತರಕಾರಿ ಮತ್ತು ಹಣ್ಣುಗಳ ಬೆಲೆ ಹೆಚ್ಚಾದಾಗ ಮಾತ್ರ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತವೆ. ದೊಡ್ಡ ಮಾಲ್‌ಗಳಲ್ಲಿ ವಸ್ತುಗಳನ್ನು ಖರೀದಿಸುವಾಗ ಚೌಕಾಸಿ ಮಾಡದವರು ರೈತರ ಉತ್ಪನ್ನಗಳ ಬೆಲೆ ಏರಿಕೆಗೆ ವಿರೋಧಿಸುವುದು ಸರಿಯಲ್ಲ ಎಂದು ಟೀಕಿಸಿದರು. ರೈತರ ಸಂಕಷ್ಟ ಅರಿತು ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿದ್ದು, ನಗರವಾಸಿಗಳು ಇದನ್ನು ವಿರೋಧಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ಬೆಂಗಳೂರು ಸೇರಿದಂತೆ ರಾಜ್ಯದ ಕಂಪನಿ ಮತ್ತು ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.60ರಷ್ಟು ಉದ್ಯೋಗ ಮೀಸಲಿಡುವಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಎಐ ತಂತ್ರಜ್ಞಾನದ ಬಳಕೆಯ ನೆಪದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿದ್ದು, ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಾರೆ ಎಂಬ ಕಾರಣ ನೀಡಿ ಬೇರೆ ರಾಜ್ಯಗಳ ಯುವಕರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

Author

ANU News

Follow Me
Other Articles
Previous

First Vande Bharat Sleeper Service in South India to Cut Bengaluru-Mumbai Travel Time by 8 Hours

Next

ಆಲಮಟ್ಟಿ ಯೋಜನೆಗೆ ಧಕ್ಕೆ ತರುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ; ಮಹಾರಾಷ್ಟ್ರಕ್ಕೆ ಕರ್ನಾಟಕದ ಖಡಕ್ ಸಂದೇಶ

Recent Posts

  • Karnataka Will Not Allow Maharashtra’s Water Diversion Plan to Affect Almatti Project: M B Patil
  • ಆಲಮಟ್ಟಿ ಯೋಜನೆಗೆ ಧಕ್ಕೆ ತರುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ; ಮಹಾರಾಷ್ಟ್ರಕ್ಕೆ ಕರ್ನಾಟಕದ ಖಡಕ್ ಸಂದೇಶ
  • ಕಂಪನಿ-ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.60ರಷ್ಟು ಉದ್ಯೋಗ; ಕಠಿಣ ಕಾನೂನು ಜಾರಿಗೆ ಕುರುಬೂರು ಶಾಂತಕುಮಾರ್ ಒತ್ತಾಯ
  • First Vande Bharat Sleeper Service in South India to Cut Bengaluru-Mumbai Travel Time by 8 Hours
  • ರಾಮ್‌ಲೀಲಾ ಮೈದಾನದ ರ್ಯಾಲಿ ಮೂಲಕ ಅಶಾಂತಿ ಸೃಷ್ಟಿಸಲು ರಾಹುಲ್ ಯತ್ನ: ನಡ್ಡಾ ಆರೋಪ
Copyright 2026 — ANU News. All rights reserved. Blogsy WordPress Theme