ಬಂಟರ ಸಂಘ ಬೆಂಗಳೂರು ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ; 2026–29ನೇ ಸಾಲಿನ ನೂತನ ಆಡಳಿತ ಮಂಡಳಿ ರಚನೆ
ಬೆಂಗಳೂರು: ಬಂಟರ ಸಂಘ ಬೆಂಗಳೂರಿನ 2026–29ನೇ ಸಾಲಿನ ನೂತನ ಆಡಳಿತ ಮಂಡಳಿ ಹಾಗೂ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಡಾ. ದೀಪಕ್ ಶೆಟ್ಟಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಘದ ಆವರಣ ಹಾಗೂ ಮುಲ್ಕಿ ಸುಂದರರಾಮ್ ಶೆಟ್ಟಿ ಮೆಮೋರಿಯಲ್ ಎಂ.ಎಸ್.ಆರ್.ಎಸ್. ನಗರ ಟ್ರಸ್ಟ್ ಹಾಲ್‌ನಲ್ಲಿ ಏಕಕಾಲದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಮಧುಕರ್ ಎಂ. ಶೆಟ್ಟಿ ಮತ್ತು ಸೌಮ್ಯಪ್ರಿಯ ಹೆಗ್ಡೆ, ಗೌರವ ಕಾರ್ಯದರ್ಶಿಯಾಗಿ ಅಮರನಾಥ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಸುರೇಖಾ ಶೆಟ್ಟಿ ಹಾಗೂ ಖಜಾಂಚಿಯಾಗಿ ರಮಿತ್ ಬಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿಗೆ ಅನಿತಾ ಪಿ. ಭಂಡಾರಿ, ಅರುಣ್ ಕುಮಾರ್ ಶೆಟ್ಟಿ ಎಚ್., ಸಿ.ಎ. ಚಂದ್ರಶೇಖರ್ ಶೆಟ್ಟಿ, ಹೀರಾ ಅನುಪ್ ಹೆಗ್ಡೆ, ಕೀರ್ತನ್ ಶೆಟ್ಟಿ, ಸಿ.ಎ. ಕಿಶೋರ್ ಶೆಟ್ಟಿ, ಮಾಲತಿ ಜೆ. ಶೆಟ್ಟಿ, ನಿತ್ಯರಂಜನ್ ಶೆಟ್ಟಿ, ಪ್ರಸಾದ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಎಸ್., ಪ್ರತಾಪ್ ಶೆಟ್ಟಿ, ರಾಮ್ದಾಸ್ ಶೆಟ್ಟಿ ಕೆ.ಎಸ್., ಶಕುಂತಳ ಶೆಟ್ಟಿ, ಸುರೇಂದ್ರ ಶೆಟ್ಟಿ ಎಚ್. ಹಾಗೂ ಉಮೇಶ್ ಪೂಂಜ ಡಿ. ಆಯ್ಕೆಯಾಗಿದ್ದಾರೆ.

ಸಂಘದ ಅಭಿವೃದ್ಧಿಗೆ ಆದ್ಯತೆ
ನೂತನ ಆಡಳಿತ ಮಂಡಳಿಯು ಸಂಘಟನಾತ್ಮಕ ಬೆಳವಣಿಗೆ, ಸದಸ್ಯರ ಕಲ್ಯಾಣ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದೆ. ಸಂಘ ಮತ್ತು ಶಾಲೆಯ ಸಮಗ್ರ ಪ್ರಗತಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶ ಹೊಂದಿದೆ.
ಸದಸ್ಯರ ಅಗತ್ಯಗಳಿಗೆ ಸ್ಪಂದಿಸುವುದು, ಸಂಘದ ಚಟುವಟಿಕೆಗಳನ್ನು ವಿಸ್ತರಿಸುವುದು ಹಾಗೂ ಮುಂದಿನ ಪೀಳಿಗೆಗೆ ಉಪಯುಕ್ತವಾಗುವ ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ನೂತನ ತಂಡ ತಿಳಿಸಿದೆ.
ಚುನಾವಣೆಯಲ್ಲಿ ಭಾಗವಹಿಸಿ ಬೆಂಬಲ ಹಾಗೂ ಮತ ನೀಡಿದ ಎಲ್ಲ ಸದಸ್ಯರಿಗೆ ನೂತನ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದ್ದು, 2026–29ನೇ ಸಾಲಿನ ಅವಧಿಯಲ್ಲಿ ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಇದೇ ರೀತಿಯ ಸಹಕಾರ ಮುಂದುವರಿಸುವಂತೆ ಮನವಿ ಮಾಡಿದೆ.