ಫಿಬಾ ಏಷ್ಯಾ ಮಹಿಳಾ ಬಾಸ್ಕೆಟ್ಬಾಲ್ ಲೀಗ್: ಜಪಾನ್ನ ಡೆನ್ಸೊ ಐರಿಸ್ಗೆ ಚಾಂಪಿಯನ್ ಪಟ್ಟ
ಬೆಂಗಳೂರು: ನಗರದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫಿಬಾ ಏಷ್ಯಾ ಮಹಿಳಾ ಬಾಸ್ಕೆಟ್ಬಾಲ್ ಲೀಗ್ ಟೂರ್ನಿಯ ಫೈನಲ್ ಪಂದ್ಯವನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ವೀಕ್ಷಿಸಿದರು.
ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಜಪಾನ್ನ ಡೆನ್ಸೊ ಐರಿಸ್ ತಂಡಕ್ಕೆ ಹಾಗೂ ರನ್ನರ್ ಅಪ್ ಸ್ಥಾನ ಪಡೆದ ಚೀನಾದ ಸಿಚುವಾನ್ ಯುಯಾಂದ ಮೀಲೆ ತಂಡಕ್ಕೆ ಅವರು ಟ್ರೋಫಿ ವಿತರಿಸಿ ಅಭಿನಂದಿಸಿದರು.

ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಆದರೆ, ಸ್ಪರ್ಧೆಯಲ್ಲಿ ಭಾಗವಹಿಸುವುದು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದು ಮತ್ತು ಕ್ರೀಡಾ ಸ್ಫೂರ್ತಿಯಿಂದ ಹೋರಾಡುವುದು ಅತ್ಯಂತ ಮುಖ್ಯ ಎಂದು ಪರಮೇಶ್ವರ್ ಹೇಳಿದರು. ಟೂರ್ನಿಯಲ್ಲಿ ಪಾಲ್ಗೊಂಡ ಎಲ್ಲ ತಂಡಗಳ ಕ್ರೀಡಾ ಬದ್ಧತೆ ಮತ್ತು ಪರಿಶ್ರಮ ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿಯೂ ತಂಡಗಳು ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಫಿಬಾ ಏಷ್ಯಾ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ತಮಿಳುನಾಡಿನ ಕ್ರೀಡಾ ಸಚಿವರು ಹಾಗೂ ಭಾರತೀಯ ಬಾಸ್ಕೆಟ್ಬಾಲ್ ಸಂಸ್ಥೆಯ ಅಧ್ಯಕ್ಷ ಆಧವ್ ಅರ್ಜುನ್, ಕರ್ನಾಟಕ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಬಿ. ದಯಾನಂದ, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.