Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

By ANU News
July 18, 2026 1 Min Read
0

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿ ಗ್ರಾಮದವರಾದ ಚೆನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ರೇವಣ್ಣ, ಬಾಲಕೃಷ್ಣ, ರಮೇಶ್ ಗೌಡ, ಕುಮಾರಸ್ವಾಮಿ ಸೇರಿದಂತೆ ನಾಲ್ವರು ಪುತ್ರರು ಹಾಗೂ ಶೈಲಜಾ, ಅನಸೂಯಾ ಎಂಬ ಇಬ್ಬರು ಪುತ್ರಿಯರಿದ್ದಾರೆ.

ದೇವೇಗೌಡರ ರಾಜಕೀಯ ಜೀವನದ ಉದ್ದಕ್ಕೂ ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಚೆನ್ನಮ್ಮ, ಆದರ್ಶ ಗೃಹಿಣಿಯಾಗಿ ಗುರುತಿಸಿಕೊಂಡಿದ್ದರು. ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2001ರಲ್ಲಿ ಹರದನಹಳ್ಳಿಯ ದೇವಸ್ಥಾನದಿಂದ ವಾಪಸಾಗುವ ವೇಳೆ ಅವರ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು.

ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಜೆಡಿಎಸ್ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Author

ANU News

Follow Me
Other Articles
Previous

Congress to Continue Protest Until Dharmendra Pradhan Quits: B.K. Hariprasad

Next

Former PM’s wife Chennamma passes away after treatment in Bengaluru

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಸೆ.22ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ; ಕನ್ನಡ ಚಿತ್ರರಂಗಕ್ಕೂ ಹಲವು ವಿಭಾಗಗಳಲ್ಲಿ ಗೌರವ
    • 72nd National Film Awards to be presented on September 22 in Gujarat
    • ವಡೋದರಾದಲ್ಲಿ ₹35,000 ಕೋಟಿ ಯೋಜನೆಗಳಿಗೆ ಮೋದಿ ಚಾಲನೆ
    • PM Modi launches ₹35,000-crore projects in Vadodara, highlights infra, manufacturing push
    • ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕೆಂಬ CWRC ಆದೇಶ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಕರ್ನಾಟಕ ಸರ್ಕಾರದ ಚಿಂತನೆ
    Copyright 2026 — ANU News. All rights reserved. Blogsy WordPress Theme