Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

By ANU News
August 31, 2026 2 Min Read
0

ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಿಸಲಾಗಿರುವ ವೃಕ್ಷೋದ್ಯಾನವನ್ನು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಲೋಕಾರ್ಪಣೆ ಮಾಡಿದರು. ಶ್ರೀ ಬಸಲಿಂಗ ಸ್ವಾಮೀಜಿ ಹಾಗೂ ಶ್ರೀ ಸಿದ್ದಲಿಂಗ ದೇವರು ತಾಳಿಕೋಟಿ ಅವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ‘ಪ್ರಕೃತಿಯಲ್ಲಿಯೇ ದೇವರನ್ನು ಕಾಣಬೇಕು’ ಎಂಬ ಸಂದೇಶ ಇಂದಿನ ಸಂದರ್ಭದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಮರ-ಗಿಡಗಳನ್ನು ಬೆಳೆಸುವುದು ಕೇವಲ ಪರಿಸರ ಸಂರಕ್ಷಣೆಯಲ್ಲ; ಮುಂದಿನ ಪೀಳಿಗೆಯ ಬದುಕನ್ನು ಸುರಕ್ಷಿತಗೊಳಿಸುವ ಕಾರ್ಯವೂ ಆಗಿದೆ ಎಂದರು.

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಸಾವಳಗಸಂಗದ ಬರಡು ಗುಡ್ಡವನ್ನು ಹಸಿರು ಪ್ರದೇಶವನ್ನಾಗಿ ರೂಪಿಸುವ ಸಂಕಲ್ಪವನ್ನು ಶಾಸಕ ಯಶವಂತರಾಯಗೌಡ ಪಾಟೀಲರು ಕೈಗೊಂಡಿರುವುದು ಶ್ಲಾಘನೀಯ. ಅವರ ಜನಪರ ಕಾರ್ಯಗಳು ಸಜ್ಜನರಿಗೆ ಅಧಿಕಾರ ದೊರೆತರೆ ಸಮಾಜಕ್ಕೆ ಒಳಿತಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿವೆ ಎಂದು ಸಚಿವರು ಹೇಳಿದರು.

100 ಹೆಕ್ಟೇರ್‌ನಲ್ಲಿ 33,500 ಸಸಿಗಳ ಹಸಿರೀಕರಣ

ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಮೂಲಕ ಆಲಮಟ್ಟಿ–ಕೃಷ್ಣಾ ನದಿಯಿಂದ ಪೈಪ್‌ಲೈನ್ ಮೂಲಕ ನೀರು ಹರಿಸುವ ಕಾರ್ಯಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲರು ವಿಶೇಷ ಆಸಕ್ತಿ ವಹಿಸಿದ್ದಾರೆ. ಇದರಿಂದ ಹಿಂದೆ ಬರಡು ಗುಡ್ಡದಂತಿದ್ದ ಪ್ರದೇಶ ಇಂದು ಹಸಿರಿನಿಂದ ಕಂಗೊಳಿಸುತ್ತಿದೆ ಎಂದು ಸಚಿವರು ಹೇಳಿದರು.

ಅರಣ್ಯ ಇಲಾಖೆಯ ಸಹಕಾರದೊಂದಿಗೆ 100 ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 33,500 ಸಸಿಗಳನ್ನು ನೆಟ್ಟು ಬೆಳೆಸಲಾಗುತ್ತಿದೆ. ವಿಜಯಪುರದಂತಹ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆಯಲ್ಲಿ ಇಂತಹ ಹಸಿರೀಕರಣ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.

ಸಾವಳಗಸಂಗವನ್ನು ಪ್ರಮುಖ ಪ್ರವಾಸಿ ತಾಣವಾಗಿ ಹಾಗೂ ಇಂಡಿಯನ್ನು ‘ಮಡಿಕೇರಿ’ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ವಿಶೇಷ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಮಲಿಂಗಾ ರೆಡ್ಡಿ ಭರವಸೆ ನೀಡಿದರು.

ವೃಕ್ಷೋದ್ಯಾನದಲ್ಲಿ ಮಕ್ಕಳಿಗಾಗಿ ಆಟದ ಮೈದಾನ, ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವನ ಮತ್ತು ಸೈನ್ಸ್ ಪಾರ್ಕ್, ಯುವಕರಿಗಾಗಿ ಜಿಪ್‌ಲೈನ್, ವೀಕ್ಷಣಾ ಗೋಪುರ ಹಾಗೂ ವಿಶ್ರಾಂತಿ ಸ್ಥಳ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ರೈತರಿಗೆ ಅರಣ್ಯ ಇಲಾಖೆಯಿಂದ ವಿವಿಧ ಜಾತಿಯ ಸಸಿಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ.

‘ಇದು ಕೇವಲ ವೃಕ್ಷೋದ್ಯಾನವಲ್ಲ; ಮಕ್ಕಳಿಗೆ ಆಟದ ತಾಣ, ವಿದ್ಯಾರ್ಥಿಗಳಿಗೆ ಕಲಿಕೆಯ ತಾಣ, ಯುವಕರಿಗೆ ಸಾಹಸದ ತಾಣ ಹಾಗೂ ಎಲ್ಲರಿಗೂ ಪ್ರಕೃತಿಯೊಂದಿಗೆ ಬೆರೆಯುವ ಸುಂದರ ತಾಣ’ ಎಂದು ಸಚಿವರು ಬಣ್ಣಿಸಿದರು.

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಿಸಿರುವ ಈ ವೃಕ್ಷೋದ್ಯಾನವು ಅವರ ಪರಿಸರ ಪ್ರೀತಿಯ ಶಾಶ್ವತ ಸ್ಮಾರಕವಾಗಿ ಬೆಳೆಯಲಿ. ಸಾವಳಗಸಂಗ ಇನ್ನಷ್ಟು ಹಸಿರಾಗಿ, ವಿಜಯಪುರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿ ಅಭಿವೃದ್ಧಿಯಾಗಲಿ ಎಂದು ಅವರು ಹಾರೈಸಿದರು.

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಸಾವಳಸಂಗದಲ್ಲಿ ಅಧ್ಯಾತ್ಮಿಕ ತಪಸ್ವಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಿಸಲಾಗಿರುವ 'ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ'ವನ್ನು ಇಂದು ಲೋಕಾರ್ಪಣೆಗೊಳಿಸಲಾಯಿತು.

ಪ್ರಕೃತಿ ರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಈ ಸುಂದರ… pic.twitter.com/vxTWvJoWKq

— Ramalinga Reddy (@RLR_BTM) August 30, 2026

Author

ANU News

Follow Me
Other Articles
Previous

‘What matters more, Hindu sentiments or vote bank?’ Ashoka attacks DK Shivakumar

Next

Gyanyogi Sri Siddeshwara Swamiji Arboretum inaugurated in Karnataka’s Savalagasanga

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • Gyanyogi Sri Siddeshwara Swamiji Arboretum inaugurated in Karnataka’s Savalagasanga
    • ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    • ‘What matters more, Hindu sentiments or vote bank?’ Ashoka attacks DK Shivakumar
    • ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್
    Copyright 2026 — ANU News. All rights reserved. Blogsy WordPress Theme