Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?

By ANU News
August 4, 2026 2 Min Read
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಅಲೆ ಎದ್ದಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಶಾಸಕರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಕೆಲ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ. ಇದೇ ವೇಳೆ, ಬೇಳೂರು ಶಾಸಕ ಗೋಪಾಲಕೃಷ್ಣ ಅವರು ಉದ್ದೇಶಪೂರ್ವಕವಾಗಿ ಸಚಿವ ಸ್ಥಾನದಿಂದ ವಂಚಿಸಲಾಗಿದೆ ಎಂದು ಆರೋಪಿಸಿ, ಶಾಸಕ ಸ್ಥಾನ ಹಾಗೂ ನಿಗಮ–ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರು ಮುಂದಿನ ರಾಜಕೀಯ ನಡೆ ಕುರಿತು ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ

ಮೈಸೂರು, ಬೆಂಗಳೂರು, ವಿಜಯಪುರ, ಬೆಳಗಾವಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಮೈಸೂರಿನಲ್ಲಿ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಅವರ ಬೆಂಬಲಿಗ ತಬ್ರೇಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ, ರಾಮದುರ್ಗ ಶಾಸಕ ಅಶೋಕ ಪಟ್ಟಣ, ಚಿತ್ರದುರ್ಗ ಶಾಸಕ ಎನ್.ವೈ. ಗೋಪಾಲಕೃಷ್ಣ, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಮುದ್ದೇಬಿಹಾಳ ಶಾಸಕ ನಾಡಗೌಡ, ಮುಧೋಳ ಶಾಸಕ ಆರ್.ಬಿ. ತಿಮ್ಮಾಪುರ ಹಾಗೂ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಬಂಗಾರಪೇಟೆಯಲ್ಲಿ ಶಾಸಕ ನಾರಾಯಣಸ್ವಾಮಿ ಅವರ ಬೆಂಬಲಿಗ ಹರೀಶ್ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದರಿಂದ ಅವರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸದ ಸುನಿಲ್ ಬೋಸ್ ರಾಜೀನಾಮೆ ನೀಡುವಂತೆ ಒತ್ತಾಯಿಸಿರುವುದಾಗಿ ತಿಳಿದುಬಂದಿದೆ. ಮುಧೋಳದಲ್ಲಿ ಆರ್.ಬಿ. ತಿಮ್ಮಾಪುರ ಬೆಂಬಲಿಗರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಂಬಲಿಗರು ಕೊಪ್ಪಳದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Author

ANU News

Follow Me
Other Articles
Previous

‘Cabinet rewards corruption’: B.Y. Vijayendra targets Shivakumar govt over ministerial picks

Next

Karnataka cabinet expansion triggers Congress revolt; MLAs face pressure to resign

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
    • ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
    • Poll strategist-turned-politician Prashant Kishor enters Bihar Assembly with big Bankipura win
    • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್
    • Karnataka cabinet expansion triggers Congress revolt; MLAs face pressure to resign
    Copyright 2026 — ANU News. All rights reserved. Blogsy WordPress Theme