Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಕ್ರೀಡೆ

ಜಿಂಬಾಬ್ವೆ ವಿರುದ್ಧ ಭಾರತ ಮಹಿಳಾ ತಂಡಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ

By ANU News
October 24, 2026 1 Min Read
0

ವಡೋದರಾ: ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡವನ್ನು 197 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಪ್ರತೀಕಾ ರಾವಲ್ ಅವರ ಅಜೇಯ ಶತಕ ಹಾಗೂ ಶಫಾಲಿ ವರ್ಮಾ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಕೇವಲ 28 ಓವರ್‌ಗಳಲ್ಲಿ ಗುರಿ ತಲುಪಿತು.

ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಶ್ರೀ ಚರಣಿ 10 ಓವರ್‌ಗಳಲ್ಲಿ 23 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇದು ಅವರ ಏಕದಿನ ವೃತ್ತಿಜೀವನದ ಅತ್ಯುತ್ತಮ ಬೌಲಿಂಗ್ ಸಾಧನೆಯಾಗಿದೆ. ಕ್ರಾಂತಿ ಗೌಡ್ 3 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ 2 ವಿಕೆಟ್ ಕಬಳಿಸಿ ಜಿಂಬಾಬ್ವೆ ಬ್ಯಾಟರ್‌ಗಳನ್ನು ಕಟ್ಟಿಹಾಕಿದರು.

ಜಿಂಬಾಬ್ವೆ ಪರ ಬೆಲವ್ಡ್ ಬಿಜಾ 62 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಮಿಚೆಲ್ ಮಾವುಂಗಾ 29 ರನ್ ಗಳಿಸಿದರು. ಭಾರತದ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿದ ಜಿಂಬಾಬ್ವೆ ತಂಡ 197 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು.

ಗುರಿ ಬೆನ್ನಟ್ಟಿದ ಭಾರತಕ್ಕೆ ಸ್ಮೃತಿ ಮಂಧಾನ ಮತ್ತು ಪ್ರತೀಕಾ ರಾವಲ್ ಮೊದಲ ವಿಕೆಟ್‌ಗೆ 93 ರನ್‌ಗಳ ಜೊತೆಯಾಟ ನೀಡಿದರು. ನಾಯಕಿ ಸ್ಮೃತಿ 32 ರನ್ ಗಳಿಸಿ ಔಟಾದರು. ಬಳಿಕ ಕ್ರೀಸ್‌ಗೆ ಬಂದ ಶಫಾಲಿ ವರ್ಮಾ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು.

ಮತ್ತೊಂದೆಡೆ, ಪ್ರತೀಕಾ ರಾವಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ 96 ಎಸೆತಗಳಲ್ಲಿ 15 ಬೌಂಡರಿಗಳ ನೆರವಿನಿಂದ ಅಜೇಯ 100 ರನ್ ಗಳಿಸಿದರು. ಇದು ಅವರ ಏಕದಿನ ವೃತ್ತಿಜೀವನದ ಮೂರನೇ ಶತಕವಾಗಿದೆ. ಪ್ರತೀಕಾ ಮತ್ತು ಶಫಾಲಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿ ಸರಣಿಯಲ್ಲಿ ಭಾರತಕ್ಕೆ ಶುಭಾರಂಭ ತಂದುಕೊಟ್ಟರು.

Author

ANU News

Follow Me
Other Articles
Previous

30ನೇ ವಯಸ್ಸಿನಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತದ ಆಟಗಾರ್ತಿ ಎಸ್. ಮೇಘನಾ

Next

India Women Crush Zimbabwe by Nine Wickets in ODI Series Opener

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಏಷ್ಯನ್ ಪ್ಯಾರಾ ಗೇಮ್ಸ್‌: 100ರ ಗಡಿ ದಾಟಿದ ಭಾರತದ ಪದಕಗಳ ಸಂಖ್ಯೆ
    • Karnataka Will Stand by Farmers, Says Minister Chaluvarayaswamy
    • India Women Crush Zimbabwe by Nine Wickets in ODI Series Opener
    • ಜಿಂಬಾಬ್ವೆ ವಿರುದ್ಧ ಭಾರತ ಮಹಿಳಾ ತಂಡಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ
    • 30ನೇ ವಯಸ್ಸಿನಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತದ ಆಟಗಾರ್ತಿ ಎಸ್. ಮೇಘನಾ
    Copyright 2026 — ANU News. All rights reserved. Blogsy WordPress Theme