Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ನಕಲಿ ಕೋರ್ಟ್ ಆದೇಶ ಆಧರಿಸಿ ಕೈದಿ ಬಿಡುಗಡೆ ಆರೋಪ: ಜೈಲು ಡಿಐಜಿ ಬಂಧನ

By ANU News
October 6, 2026 1 Min Read
0

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬನನ್ನು ಜೈಲಿನಿಂದ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಅಪರಾಧಿಯನ್ನು ನಕಲಿ ಸುಪ್ರೀಂ ಕೋರ್ಟ್ ಆದೇಶದ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಡಿಐಜಿ ಸೋಮಶೇಖರ್ ಅವರ ಪಾತ್ರದ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣದಲ್ಲಿ ಜೈಲಿನ ಎಸ್‌ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತನ ವಿರುದ್ದವೂ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು.

2001ರಲ್ಲಿ ಕೊಲೆ, ಅಪಹರಣ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರ್ ಬಂಧನಕ್ಕೊಳಗಾಗಿದ್ದ. ವಿಚಾರಣೆ ನಡೆಸಿದ ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು ಎನ್ನಲಾಗಿದೆ.

Author

ANU News

Follow Me
Other Articles
Previous

Bengaluru: 25-year-old gym trainer dies after alleged assault at apartment

Next

ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • 25 ವರ್ಷಗಳ ಸೇವೆ ವೈಯಕ್ತಿಕ ಸಾಧನೆಯಲ್ಲ: ಪ್ರಧಾನಿ ಮೋದಿ
    • 25 Years as Head of Government Is Not Personal Glory, Says PM Modi
    • ‘Orijinal’: Unique title, time-travel plot fuel curiosity around Sreenath Bhasi film
    • ‘ಒರಿಜಿನಲ್’: ಶ್ರೀನಾಥ್ ಭಾಸಿ ಅಭಿನಯದ ಟೈಮ್-ಟ್ರಾವೆಲ್ ಥ್ರಿಲ್ಲರ್
    • ‘Drones’: Surrealist fantasy film to hit screens on October 16
    Copyright 2026 — ANU News. All rights reserved. Blogsy WordPress Theme