Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

By ANU News
July 16, 2026 1 Min Read
0

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, “2010ರಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿ ಈಗಿನ ವೈಫಲ್ಯವನ್ನು ಸಮರ್ಥಿಸಿಕೊಳ್ಳಬೇಡಿ. ನಿಮ್ಮ ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಹೇಳಬೇಡಿ” ಎಂದು ಟೀಕಿಸಿದ್ದಾರೆ.

“ನಿಮಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಸಮಯ ಇದೆ. ಆದರೆ ಜೈಲು ಭದ್ರತೆ ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡಲು ಸಮಯ ಇಲ್ಲವೇ?” ಎಂದು ವ್ಯಂಗ್ಯವಾಡಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೈದಿಗಳು ಜೈಲಿನಿಂದ ಪರಾರಿಯಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿರುವ ಅವರು, “ಮಹತ್ವದ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಅವರ ಯೋಗ್ಯತೆಯನ್ನು ತೋರಿಸುತ್ತದೆ” ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಆಡಳಿತದಲ್ಲಿ ಜೈಲುಗಳಲ್ಲಿ ನಡೆದ ಘಟನೆಗಳು ರಾಜ್ಯದ ಕಾನೂನು-ಸುವ್ಯವಸ್ಥೆಯ ಸ್ಥಿತಿಯನ್ನು ಬಿಂಬಿಸುತ್ತವೆ ಎಂದು ಆರೋಪಿಸಿದ ವಿಜಯೇಂದ್ರ, “ಇಂತಹ ಹೇಳಿಕೆ ನೀಡಲು ನಿಮಗೆ ನಾಚಿಕೆಯಾಗಬೇಕು” ಎಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

Author

ANU News

Follow Me
Other Articles
Previous

‘More jailbreaks occurred under BJP rule’: Priyank Kharge hits back at Vijayendra over Kalaburagi prison escape

Next

K’taka jailbreak: ‘Don’t cover up failure with excuses,’ Vijayendra hits out at Priyank Kharge

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
    • Gowri-Ganesha festival: KSRTC to operate 2,400 extra buses from Bengaluru
    • Mekedatu project: Karnataka steps up land process, officials told to fast-track work
    • ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ
    • Karnataka steps up crackdown on PoP Ganesh idols; 872 seized across 9 districts
    Copyright 2026 — ANU News. All rights reserved. Blogsy WordPress Theme