Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಳೆಗಾಲಕ್ಕಷ್ಟೇ ಜೋಗ ಸೀಮಿತವಲ್ಲ; ವರ್ಷವಿಡೀ ಜಲಧಾರೆಗೆ ಮಾಸ್ಟರ್ ಪ್ಲಾನ್

By Anu News
October 1, 2026 1 Min Read
0

ಬೆಂಗಳೂರು: ಮಳೆಗಾಲದಲ್ಲಿ ಮಾತ್ರ ಭೋರ್ಗರೆಯುವ ಜೋಗ ಜಲಪಾತವನ್ನು ಇನ್ನು ಮುಂದೆ ವರ್ಷವಿಡೀ ಪ್ರವಾಸಿಗರು ಕಣ್ತುಂಬಿಕೊಳ್ಳುವಂತೆ ಮಾಡಲು ಪ್ರವಾಸೋದ್ಯಮ ಇಲಾಖೆ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ.

ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜೋಗ ಜಲಪಾತ ಅಭಿವೃದ್ಧಿ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದರು.

ಜೋಗ ಜಲಪಾತದಲ್ಲಿ ವರ್ಷದ ನಿಗದಿತ ಅವಧಿಗಳಲ್ಲೂ ನೀರಿನ ಹರಿವು ಕಾಯ್ದುಕೊಳ್ಳುವ ಪ್ರಸ್ತಾವನೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಯಿತು. ಜಲಪಾತದ ಮೇಲ್ಭಾಗಕ್ಕೆ ನೀರನ್ನು ಪಂಪ್ ಮಾಡುವ ಉದ್ದೇಶಿತ ವ್ಯವಸ್ಥೆಯ ಬಗ್ಗೆ ಸಮಗ್ರ ಕಾರ್ಯಸಾಧ್ಯತಾ ಅಧ್ಯಯನ ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯೋಜನೆಗೆ ಎಷ್ಟು ಪ್ರಮಾಣದ ನೀರು ಬೇಕಾಗುತ್ತದೆ, ಪಂಪಿಂಗ್ ಸಾಮರ್ಥ್ಯ ಎಷ್ಟಿರಬೇಕು, ವಿದ್ಯುತ್ ಬಳಕೆ ಮತ್ತು ಕಾರ್ಯಾಚರಣಾ ವೆಚ್ಚ ಎಷ್ಟಾಗಲಿದೆ ಎಂಬುದನ್ನು ಅಧ್ಯಯನ ಮಾಡಬೇಕು. ಜತೆಗೆ ಯೋಜನೆಯ ದೀರ್ಘಾವಧಿಯ ಆರ್ಥಿಕ ಕಾರ್ಯಸಾಧ್ಯತೆ ಹಾಗೂ ಸುರಕ್ಷತಾ ಅಂಶಗಳನ್ನೂ ಪರಿಶೀಲಿಸುವಂತೆ ಸೂಚಿಸಿದರು.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಹಾಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸೇರಿದಂತೆ ಸಂಬಂಧಿತ ಸಂಸ್ಥೆಗಳಿಂದ ಪಡೆಯಬೇಕಾದ ಅಗತ್ಯ ಅನುಮೋದನೆಗಳ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜೋಗ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇದರ ಪ್ರವಾಸೋದ್ಯಮ ಸಾಮರ್ಥ್ಯವನ್ನು ಮಳೆಗಾಲಕ್ಕೆ ಮಾತ್ರ ಸೀಮಿತಗೊಳಿಸಬಾರದು. ವರ್ಷಪೂರ್ತಿ ಪ್ರವಾಸಿಗರನ್ನು ಆಕರ್ಷಿಸುವ ತಾಣವನ್ನಾಗಿ ಅಭಿವೃದ್ಧಿಪಡಿಸುವುದು ಸರ್ಕಾರದ ಉದ್ದೇಶ ಎಂದು ಜಾರ್ಜ್ ಹೇಳಿದರು.

ಪ್ರಸ್ತಾವನೆ ಅಂತಿಮಗೊಳಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಭೆ ನಡೆಸಲಾಗುವುದು ಎಂದರು. ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡುವಂತೆ ಹಾಗೂ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪುರಾತತ್ವ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳು ಮತ್ತು ಸಂಸ್ಥೆಗಳಿಂದ ಪಡೆಯಬೇಕಾದ ನಿರಾಕ್ಷೇಪಣಾ ಪತ್ರ ಹಾಗೂ ಇತರ ಅನುಮತಿಗಳನ್ನು ತ್ವರಿತವಾಗಿ ಪಡೆದು ಯೋಜನೆಯನ್ನು ವೇಗಗೊಳಿಸುವಂತೆ ನಿರ್ದೇಶನ ನೀಡಿದರು.

Author

Anu News

Follow Me
Other Articles
Previous

Belagavi civic body passes Karnataka integration resolution after 21 years

Next

Jog Falls may flow year-round under tourism department plan

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Bharavase Foundation takes cancer prevention message to Bengaluru workplace
    • Jog Falls may flow year-round under tourism department plan
    • ಮಳೆಗಾಲಕ್ಕಷ್ಟೇ ಜೋಗ ಸೀಮಿತವಲ್ಲ; ವರ್ಷವಿಡೀ ಜಲಧಾರೆಗೆ ಮಾಸ್ಟರ್ ಪ್ಲಾನ್
    • Belagavi civic body passes Karnataka integration resolution after 21 years
    • 21 ವರ್ಷಗಳ ಬಳಿಕ ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರ ನಿರ್ಣಯ; ಪಕ್ಷಭೇದ ಮರೆತು ಒಂದಾದ ಸದಸ್ಯರು
    Copyright 2026 — ANU News. All rights reserved. Blogsy WordPress Theme