Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ವಿದೇಶ

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

By ANU News
September 15, 2026 2 Min Read
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯ ಮಾಡಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತನ ಕಾಯಕಲ್ಪದೊಂದಿಗೆ ಪುನರಾರಂಭಿಸಲಾಗಿದೆ.

ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರ ಸಮ್ಮುಖದಲ್ಲಿ ಪಾಠಶಾಲೆಯ ಪುನರಾರಂಭವನ್ನು ಅಧಿಕೃತವಾಗಿ ಘೋಷಿಸಲಾಯಿತು.

ಶಿಕ್ಷಕರು, ಪೋಷಕರಿಗೆ ತರಬೇತಿ

ಕನ್ನಡ ಪಾಠಶಾಲೆಯ ಶಿಕ್ಷಕರು ಹಾಗೂ ಪೋಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಡಾ. ಪುರುಷೋತ್ತಮ ಬಿಳಿಮಲೆ ನಡೆಸಿಕೊಟ್ಟರು. ಮಕ್ಕಳ ವಯಸ್ಸು ಹಾಗೂ ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಕನ್ನಡ ಬೋಧಿಸುವ ವಿಧಾನ, ಪಠ್ಯಕ್ರಮವನ್ನು ವ್ಯವಸ್ಥಿತವಾಗಿ ಅಳವಡಿಸಿಕೊಳ್ಳುವ ಕ್ರಮ ಹಾಗೂ ಮಕ್ಕಳಲ್ಲಿ ಕನ್ನಡ ಕಲಿಕೆಯ ಆಸಕ್ತಿ ಹೆಚ್ಚಿಸುವ ಬೋಧನಾ ತಂತ್ರಗಳ ಕುರಿತು ಅವರು ಮಾರ್ಗದರ್ಶನ ನೀಡಿದರು.

ಕನ್ನಡ ಸೇವೆಯನ್ನು ಸ್ವಯಂಪ್ರೇರಣೆಯಿಂದ ಸಲ್ಲಿಸುತ್ತಿರುವ ಶಿಕ್ಷಕರ ಕೊಡುಗೆಯನ್ನು ಕಾರ್ಯಕ್ರಮದಲ್ಲಿ ಶ್ಲಾಘಿಸಲಾಯಿತು. ಪಾಠಶಾಲೆಯ ಪುನರಾರಂಭಕ್ಕೆ ಕರ್ನಾಟಕ ಸಂಘ ಕತಾರ್‌ನ ನಿರ್ವಹಣಾ ಸಮಿತಿ ಸದಸ್ಯರು ವಿಶೇಷ ಆಸಕ್ತಿ, ಸಮಯ ಹಾಗೂ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ.

ನಿಯಮಿತ ತರಗತಿಗಳಿಗೆ ಚಾಲನೆ

ಕನ್ನಡ ಪಾಠಶಾಲೆಯ ನಿಯಮಿತ ತರಗತಿಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಪ್ರತಿ ಶುಕ್ರವಾರ ಬೆಳಿಗ್ಗೆ 9.30ಕ್ಕೆ ತರಗತಿಗಳು ನಡೆಯಲಿವೆ. ಮಕ್ಕಳ ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಮೂರು ಹಂತಗಳಲ್ಲಿ ತರಗತಿಗಳನ್ನು ಆಯೋಜಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ಕಾರ್ಯಕ್ರಮ ಮುಂದುವರಿಯಲಿದೆ.

ಮಕ್ಕಳಲ್ಲಿ ಒಗ್ಗಟ್ಟು ಹಾಗೂ ಸಮಾನತೆಯ ಭಾವನೆ ಬೆಳೆಸುವ ಉದ್ದೇಶದಿಂದ ಪಾಠಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಕರ್ನಾಟಕ ಸಂಘ ಕತಾರ್ ವತಿಯಿಂದ ಒಂದೇ ರೀತಿಯ ಟಿ-ಶರ್ಟ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು, ಸಲಹಾ ಸಮಿತಿ ಅಧ್ಯಕ್ಷ ಡಾ. ರವಿ ಶೆಟ್ಟಿ, ಮಾಜಿ ಅಧ್ಯಕ್ಷ ಎಚ್.ಕೆ. ಮಧು, ಉಪಾಧ್ಯಕ್ಷ ಅನಿಲ್ ಭಾಸಗಿ, ನಿರ್ವಹಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯ ಇತಿಹಾಸ, ಕನ್ನಡಿಗರ ಹೆಮ್ಮೆ ಹಾಗೂ ಮಾತೃಭಾಷೆಯ ಮಹತ್ವವನ್ನು ಗಣ್ಯರು ವಿವರಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರೋತ್ಸಾಹ ನೀಡಿದರು. ಕತಾರ್‌ನಲ್ಲಿ ನೆಲೆಸಿರುವ ಹೆಚ್ಚಿನ ಕನ್ನಡಿಗರು ತಮ್ಮ ಮಕ್ಕಳನ್ನು ಕನ್ನಡ ಪಾಠಶಾಲೆಗೆ ದಾಖಲಿಸಿ, ಭಾಷೆ ಹಾಗೂ ಸಂಸ್ಕೃತಿಯೊಂದಿಗಿನ ಅವರ ನಂಟನ್ನು ಗಟ್ಟಿಗೊಳಿಸಬೇಕು ಎಂದು ಕರ್ನಾಟಕ ಸಂಘ ಕತಾರ್ ಮನವಿ ಮಾಡಿದೆ.

Author

ANU News

Follow Me
Other Articles
Previous

Mekedatu project is only permanent solution to Cauvery dispute, says K’taka minister

Next

Kannada school reopens in Qatar with renewed focus on language, culture

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ
    • Probe sought into alleged lapses, poor quality in Jal Jeevan Mission works
    • Kannada school reopens in Qatar with renewed focus on language, culture
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ
    • Mekedatu project is only permanent solution to Cauvery dispute, says K’taka minister
    Copyright 2026 — ANU News. All rights reserved. Blogsy WordPress Theme