Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

By Anu News
August 25, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ತೀವ್ರ ನೀರಿನ ಅಭಾವದ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಿದೆ. ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸುಮಾರು ₹27 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ಅಗತ್ಯವಿರುವ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿವೆ. ಮೂರು ವಿಶೇಷ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಆರಂಭಿಕ ತಾಂತ್ರಿಕ ಪರೀಕ್ಷೆ ನಡೆಸಲಾಗುವುದು ಎಂದರು.

ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಮಾನಿಟರಿಂಗ್ ಹಾಗೂ ತಾಂತ್ರಿಕ ಸಮಿತಿಗಳನ್ನು ರಚಿಸಿ, ಅವುಗಳ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಎರಡು ಉನ್ನತ ಮಟ್ಟದ ಸಭೆಗಳು ನಡೆದಿದ್ದು, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

“ಶೇ.30ರಷ್ಟು ಯಶಸ್ಸು ಸಿಕ್ಕರೂ ಅನುಕೂಲವಾಗಲಿದೆ. ಈ ಹಿಂದೆ ಮೂರು ಬಾರಿ ಮೋಡ ಬಿತ್ತನೆ ನಡೆಸಲಾಗಿದೆ. ಪ್ರಸ್ತುತ ಮಳೆ ಕೊರತೆ ಇರುವುದರಿಂದ ರೈತರ ಒತ್ತಡವೂ ಇದೆ. ಹೀಗಾಗಿ ಮೋಡ ಬಿತ್ತನೆಗೆ ಮುಂದಾಗಿದ್ದೇವೆ” ಎಂದು ಚಲುವರಾಯಸ್ವಾಮಿ ತಿಳಿಸಿದರು.

ಮೋಡ ಬಿತ್ತನೆ ವೇಳೆ ಮೋಡಗಳ ಲಭ್ಯತೆಯನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗುವುದು. 60 ದಿನಗಳ ಅವಧಿಯಲ್ಲಿ ಗಂಟೆಗಳ ಆಧಾರದ ಮೇಲೆ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.

ಮೋಡ ಬಿತ್ತನೆಯ ಯಶಸ್ಸಿನ ಪ್ರಮಾಣ ಕಡಿಮೆ ಇರುವುದನ್ನು ಸರ್ಕಾರ ಅರಿತಿದ್ದರೂ, ಬರ ಪರಿಸ್ಥಿತಿಯಲ್ಲಿ ಮಳೆಯಾಗುವ ಸಾಧ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Author

Anu News

Follow Me
Other Articles
Previous

Priyank Kharge questions Centre’s ethanol policy: ‘Who gets subsidy, who benefits?’

Next

Karnataka plans cloud seeding to tackle rain deficit; ₹27 crore project

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Mandadi’ teaser out; Suri plays sailor in high-seas adventure
    • ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ
    • Telangana bus crashes into container truck; 6 killed, 20 injured
    • ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ
    • Karnataka minister B Nagendra likely to quit over Valmiki scam allegations
    Copyright 2026 — ANU News. All rights reserved. Blogsy WordPress Theme