Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

By ANU News
September 7, 2026 1 Min Read
0

ಬೆಂಗಳೂರು, ಸೆಪ್ಟೆಂಬರ್ 7: ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ರೈತರಿಗೆ ಅದರ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ಕರ್ನಾಟಕ ನೀರಾವರಿ ನಿಗಮದ ವಿವಿಧ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಹಲವು ನಿರ್ದೇಶನ ನೀಡಿದ ಸಚಿವರು, ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬ ಅಥವಾ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

“ಯೋಜನೆಗಳ ಪ್ರಗತಿ ಕಡತಗಳಲ್ಲಿ ಮಾತ್ರ ಕಾಣಿಸಿಕೊಳ್ಳಬಾರದು; ಕಾಮಗಾರಿ ಸ್ಥಳದಲ್ಲೂ ಕಾಣಬೇಕು” ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಯೋಜನೆಯ ಕಾಮಗಾರಿ ಯಾವ ಹಂತದಲ್ಲಿದೆ, ಎದುರಾಗಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳೇನು ಮತ್ತು ಅವುಗಳ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತು ಸಚಿವರು ಮಾಹಿತಿ ಪಡೆದರು.

ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ

ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ನೀರಾವರಿ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತಿರಬೇಕು. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಕಳಪೆ ಕಾಮಗಾರಿ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕಡತ ಪರಿಶೀಲಿಸುವುದಕ್ಕೆ ಸೀಮಿತವಾಗದೆ, ಕಾಮಗಾರಿ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ ಗುಣಮಟ್ಟ ಹಾಗೂ ಪ್ರಗತಿಯನ್ನು ಪರಿಶೀಲಿಸಬೇಕು ಎಂದರು.

ನೀರಾವರಿ ಯೋಜನೆಗಳ ಅಂತಿಮ ಉದ್ದೇಶ ರೈತರ ಜಮೀನುಗಳಿಗೆ ನೀರು ತಲುಪಿಸುವುದಾಗಿದೆ. ಹೀಗಾಗಿ ಯಾವುದೇ ಯೋಜನೆ ವರ್ಷಗಳ ಕಾಲ ನೆನೆಗುದಿಗೆ ಬೀಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ಹೇಳಿದರು.

ಭೂಸ್ವಾಧೀನ, ಪುನರ್ವಸತಿ, ಅರಣ್ಯ ಹಾಗೂ ಪರಿಸರ ಅನುಮತಿ ಸೇರಿದಂತೆ ಎದುರಾಗುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಬಗೆಹರಿಸಬೇಕು ಎಂದು ಸೂಚಿಸಿದರು.

ಪ್ರಗತಿಯಲ್ಲಿರುವ ಎಲ್ಲ ಯೋಜನೆಗಳಿಗೆ ಸ್ಪಷ್ಟ ಕಾಲಮಿತಿ ನಿಗದಿಪಡಿಸಿ, ಹಂತವಾರು ಪ್ರಗತಿ ಪರಿಶೀಲನೆ ನಡೆಸಬೇಕು. ನಿಗದಿತ ಗುರಿ ತಲುಪದ ಯೋಜನೆಗಳ ಕುರಿತು ಕಾರಣ ಪರಿಶೀಲಿಸಿ, ಅಗತ್ಯವಿದ್ದರೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು.

Author

ANU News

Follow Me
Other Articles
Previous

Bengaluru gets its first ‘Circular Textile Lab’ to turn textile waste into useful products

Next

ಗ್ರಾಮೀಣ LPG ಗ್ರಾಹಕರಿಗೆ ಗುಡ್ ನ್ಯೂಸ್: 45 ದಿನಗಳ ಗಡುವು 25 ದಿನಕ್ಕೆ ಇಳಿಕೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭೇಟಿ ಮಾಡಿದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಪತ್ನಿ ಅಕೀ ಅಬೆ
    • India-Japan cultural ties discussed at Akie Abe’s meeting with RSS leadership
    • ಅಪಾರ್ಟ್‌ಮೆಂಟ್‌ಗಳ ಭದ್ರತೆ, ಡ್ರಗ್ಸ್ ವಿರುದ್ಧ ಜಾಗೃತಿ, ರಾತ್ರಿ ಬಿಗಿ ಗಸ್ತು ಬಿಗಿ.. ಬೆಂಗಳೂರು ಈಶಾನ್ಯದಲ್ಲಿ ಅಪರಾಧ ನಿಯಂತ್ರಣಕ್ಕೆ ‘ಮಿಥುನ್ ಸೂತ್ರ’
    • Shinzo Abe’s Wife Akie Abe Meets RSS General Secretary Dattatreya Hosabale in Delhi
    • Bengaluru Northeast police review focuses on cybercrime, narcotics and public safety
    Copyright 2026 — ANU News. All rights reserved. Blogsy WordPress Theme