Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

By Anu News
September 5, 2026 1 Min Read
0

ಬೆಂಗಳೂರು, ಸೆ.5: ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಚಾಲನೆ ನೀಡಿದರು.

ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಬದಲು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಎಲ್ಲ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಸಾಧ್ಯವಾಗದಿದ್ದರೂ, ಜನರ ಅಹವಾಲುಗಳನ್ನು ನೇರವಾಗಿ ಆಲಿಸಿ ಸೂಕ್ತ ಪರಿಹಾರ ಒದಗಿಸಲು ಈ ಅಭಿಯಾನ ಸಹಕಾರಿಯಾಗಲಿದೆ ಎಂದರು.

ಏನಿದು ಪ್ರಜಾಸೇವಾ ಅಭಿಯಾನ?

ಪಿಂಚಣಿ, ಪಹಣಿ, ಪಡಿತರ ಚೀಟಿ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಿಗೆ ಜನರು ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶ. ಜನರ ಮನೆ ಬಾಗಿಲಿಗೆ ತೆರಳಿ ಅಹವಾಲು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗಿದೆ.

ಹೇಗೆ ನಡೆಯಲಿದೆ?

ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಮುಂದಿನ ಹಂತದಲ್ಲಿ ಇದನ್ನು ಹೋಬಳಿ ಮಟ್ಟಕ್ಕೂ ವಿಸ್ತರಿಸುವ ಉದ್ದೇಶವಿದೆ.

ಎರಡನೇ ಮತ್ತು ನಾಲ್ಕನೇ ಶನಿವಾರ ಶಾಸಕರು ಹಾಗೂ ಅಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಮನೆಮನೆಗೆ ಅರ್ಜಿ

ಸಭೆ ನಡೆಯುವ ಸುಮಾರು 15 ದಿನಗಳ ಮುಂಚಿತವಾಗಿ ಮನೆಮನೆಗೆ ಅರ್ಜಿ ನಮೂನೆ ತಲುಪಿಸಲಾಗುತ್ತದೆ. ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಸಲ್ಲಿಸಬಹುದು. ಸಭೆಯ ದಿನವೂ ನೇರವಾಗಿ ಅರ್ಜಿ ನೀಡಲು ಅವಕಾಶವಿದೆ.

ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಮೊಬೈಲ್ ಸಂಖ್ಯೆ ಸೇರಿದಂತೆ ಸಮಸ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಟ್ರ್ಯಾಕಿಂಗ್

ಸಾರ್ವಜನಿಕರು ತಮ್ಮ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು ಅವಕಾಶ ಕಲ್ಪಿಸಲಾಗುತ್ತದೆ. 1902 ಸಹಾಯವಾಣಿ ಹಾಗೂ AI ಆಧಾರಿತ ಕಾಲ್ ಸೆಂಟರ್ ಮೂಲಕವೂ ಮಾಹಿತಿ ಪಡೆಯಬಹುದು.

ಪ್ರತಿ ಬುಧವಾರ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರ್ಜಿಗಳ ಪರಿಶೀಲನೆ ನಡೆಯಲಿದೆ. ನಿಗದಿತ ಅವಧಿಯಲ್ಲಿ ಸಮಸ್ಯೆ ಪರಿಹಾರವಾಗದಿದ್ದರೆ ಅರ್ಜಿ ಸ್ವಯಂಚಾಲಿತವಾಗಿ ಮೇಲಾಧಿಕಾರಿಗಳ ಗಮನಕ್ಕೆ ಹೋಗಲಿದೆ.

Author

Anu News

Follow Me
Other Articles
Previous

Karnataka launches ‘Praja Seva’ campaign to take government services to people’s doorsteps

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ
    • Karnataka launches ‘Praja Seva’ campaign to take government services to people’s doorsteps
    • Elephant camps reopen in Kodagu with stricter safety norms; Dubare remains shut
    • ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ
    • Ancient gold coins found in Karnataka village; could they date back centuries?
    Copyright 2026 — ANU News. All rights reserved. Blogsy WordPress Theme