Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯಕ್ಕೆ ₹7,142 ಕೋಟಿ ಬರ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಮನವಿ

By ANU News
October 4, 2026 2 Min Read
0

ಬೆಂಗಳೂರು: ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (NDRF) ಮಾನದಂಡಗಳ ಅನ್ವಯ ರಾಜ್ಯಕ್ಕೆ ₹7,142.64 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಅಂತರ್ ಸಚಿವಾಲಯದ ಕೇಂದ್ರ ತಂಡದೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ, ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ವಿವರಿಸಿದರು.

ರಾಜ್ಯದಲ್ಲಿ ಒಟ್ಟು 217 ತಾಲೂಕುಗಳು ಬರದಿಂದ ಬಾಧಿತವಾಗಿದ್ದು, ಈ ಪೈಕಿ ಘೋಷಣೆಯಾಗಿರುವ 177 ಬರಪೀಡಿತ ತಾಲೂಕುಗಳಲ್ಲಿ ಸುಮಾರು ₹46,324.50 ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಆರಂಭದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ₹3,701 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಇದೀಗ ಪರಿಷ್ಕೃತ ಪಟ್ಟಿಯ ಪ್ರಕಾರ 177 ತಾಲೂಕುಗಳಿಗೆ ಒಟ್ಟು ₹7,142.64 ಕೋಟಿ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಕೋರಲಾಗಿದೆ ಎಂದು ತಿಳಿಸಿದರು.

ಯಾವುದೇ ಒತ್ತಡಗಳಿಗೆ ಮಣಿಯದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವೈಜ್ಞಾನಿಕವಾಗಿ ಬರ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ ಬಳಿಕವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹೀಗಾಗಿ ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿಕೊಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ರೈತರು ಸಂಕಷ್ಟಕ್ಕೆ ಸಿಲುಕಿದರೆ ಕೃಷಿ ಮಾತ್ರವಲ್ಲದೆ ಇಡೀ ಆರ್ಥಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತದೆ. ರೈತರ ನೆರವಿಗೆ ಕೇಂದ್ರ ಸರ್ಕಾರ ತುರ್ತಾಗಿ ಧಾವಿಸಬೇಕು. ತಮ್ಮ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಜನರು ಇಷ್ಟೊಂದು ತೊಂದರೆ ಅನುಭವಿಸುತ್ತಿರುವುದನ್ನು ಕಂಡಿಲ್ಲ. ಪ್ರಸ್ತುತ ಪರಿಸ್ಥಿತಿ ಅತ್ಯಂತ ಆಘಾತಕಾರಿಯಾಗಿದೆ ಎಂದು ಹೇಳಿದರು.

ಕೃಷ್ಣಾ ಜಲಾನಯನ ಪ್ರದೇಶವನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿಯೂ ಮಳೆಯ ತೀವ್ರ ಕೊರತೆ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುವಂತೆ ಕೇಂದ್ರ ಜಲ ಆಯೋಗ (CWC) ಆದೇಶಿಸುತ್ತಿದೆ. ನಗರ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ಮುಖ್ಯಮಂತ್ರಿ ಗಮನಸೆಳೆದರು.

ರಾಜ್ಯ ಸರ್ಕಾರವು ರೈತರಿಗೆ ತಲಾ ₹2,500 ಪರಿಹಾರ ಘೋಷಿಸಿದ್ದು, ಬರದ ಪರಿಣಾಮ ಎದುರಿಸಲು ಕೇಂದ್ರದಿಂದ ಹೆಚ್ಚಿನ ಆರ್ಥಿಕ ನೆರವಿನ ನಿರೀಕ್ಷೆಯಿದೆ ಎಂದು ತಿಳಿಸಿದರು.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಅಧಿಕಾರಿಗಳೂ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬರ ಪರಿಸ್ಥಿತಿ ಕುರಿತು ನೀಡಿದ್ದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿತ್ತು. ರೈತರಿಗೂ ಬಿತ್ತನೆ ಕುರಿತು ಮಾರ್ಗದರ್ಶನ ನೀಡಲಾಗಿತ್ತು ಎಂದು ಮುಖ್ಯಮಂತ್ರಿ ವಿವರಿಸಿದರು.

ಬರದ ಪರಿಣಾಮದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಬ್ಬು ಬೆಳೆಗಾರರು ಹೆಚ್ಚಿನ ಬೆಲೆಗೆ ಒತ್ತಾಯಿಸುತ್ತಿದ್ದಾರೆ. ಹಾಲು ಉತ್ಪಾದಕರೂ ಪ್ರತಿ ಲೀಟರ್ ಹಾಲಿಗೆ ಕನಿಷ್ಠ ₹10 ದರ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಇಂತಹ ಸವಾಲಿನ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರೈತರು ಹಾಗೂ ಜನಸಾಮಾನ್ಯರಿಗೆ ನೆರವಾಗಬೇಕು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

Author

ANU News

Follow Me
Other Articles
Previous

‘Prajaseve’ campaign reaches 620 locations in Karnataka, over one lakh grievances received

Next

Karnataka seeks ₹7,142 crore drought relief from Centre

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Bhagwant Khuba vows to fight for justice in Sudarshan Ratkale death case
    • Coastal Karnataka lawyers seek High Court circuit bench; submit memorandum to Rajya Sabha MP
    • ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ: ರಾಜ್ಯಸಭಾ ಸಂಸದರಿಗೆ ಉಡುಪಿ ವಕೀಲರ ಮನವಿ
    • ಸುದರ್ಶನ್ ರಟ್ಕಲೆ ಸಾವಿನ ಪ್ರಕರಣ: ನ್ಯಾಯಕ್ಕಾಗಿ ಹೋರಾಟದ ಭರವಸೆ ನೀಡಿದ ಭಗವಂತ ಖೂಬಾ
    • ‘ಗ್ಯಾರಂಟಿ ಸೇವಾ ಕೇಂದ್ರ’ವನ್ನು ‘ಕಾಂಗ್ರೆಸ್‌ನ ಹೊಸ ವಸೂಲಿ ಕೇಂದ್ರ’ ಎಂದ ಬಿಜೆಪಿ
    Copyright 2026 — ANU News. All rights reserved. Blogsy WordPress Theme