Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಪ್ರಥಮ ಪಿಯುಸಿ ಪರೀಕ್ಷೆಗೆ ರಾಜ್ಯಮಟ್ಟದ ಪ್ರಶ್ನೆಪತ್ರಿಕೆ, ಏಕರೂಪದ ವೇಳಾಪಟ್ಟಿ; ಪರೀಕ್ಷೆ, ಮೌಲ್ಯಮಾಪನ ಕಾಲೇಜುಗಳಲ್ಲೇ

By ANU News
November 8, 2026 1 Min Read
Comments Off on ಪ್ರಥಮ ಪಿಯುಸಿ ಪರೀಕ್ಷೆಗೆ ರಾಜ್ಯಮಟ್ಟದ ಪ್ರಶ್ನೆಪತ್ರಿಕೆ, ಏಕರೂಪದ ವೇಳಾಪಟ್ಟಿ; ಪರೀಕ್ಷೆ, ಮೌಲ್ಯಮಾಪನ ಕಾಲೇಜುಗಳಲ್ಲೇ

ಬೆಂಗಳೂರು: ಪದವಿ ಪೂರ್ವ ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ 2027ರಲ್ಲಿ ನಡೆಯಲಿರುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಜವಾಬ್ದಾರಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಗೆ (KSEAB) ವಹಿಸಿ ಆದೇಶ ಹೊರಡಿಸಲಾಗಿದೆ. ಆದರೆ ಪರೀಕ್ಷೆಯನ್ನು ಮಂಡಳಿ ನಡೆಸುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನೇತೃತ್ವದಲ್ಲೇ ಪರೀಕ್ಷೆ ನಡೆಯಲಿದೆ.

ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗುವಂತೆ ಏಕರೂಪದ ಪರೀಕ್ಷಾ ವೇಳಾಪಟ್ಟಿ ರೂಪಿಸಲಾಗುತ್ತದೆ. ಪರೀಕ್ಷೆಯ ದಿನದಂದು ಪ್ರಶ್ನೆಪತ್ರಿಕೆಗಳನ್ನು ಡಿಜಿಟಲ್ ರೂಪದಲ್ಲಿ ಕಾಲೇಜುಗಳಿಗೆ ಕಳುಹಿಸಲಾಗುತ್ತದೆ. ಪ್ರಾಯೋಗಿಕ ಪರೀಕ್ಷೆಗಳು ಮಾತ್ರ ಜಿಲ್ಲಾಮಟ್ಟದಲ್ಲಿ ಸಿದ್ಧಪಡಿಸಿದ ವೇಳಾಪಟ್ಟಿಯಂತೆ ನಡೆಯಲಿವೆ.

ರಾಜ್ಯಮಟ್ಟದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದರೂ ಮೌಲ್ಯಮಾಪನ ಕಾಲೇಜು ಹಂತದಲ್ಲೇ ನಡೆಯಲಿದೆ. ಫಲಿತಾಂಶವನ್ನು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು ಪರಿಶೀಲಿಸಿ ಅನುಮೋದಿಸಿದ ಬಳಿಕ ಪ್ರಕಟಿಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಈ ಕ್ರಮದಿಂದ ಪ್ರಥಮ ಪಿಯುಸಿ ಹಂತದಲ್ಲೇ ಶಿಕ್ಷಣದ ಗುಣಮಟ್ಟವನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಾಗಲಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೂ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು, ಕಾಲೇಜು ಆಡಳಿತ ಮಂಡಳಿಗಳು ಹಾಗೂ ಪೋಷಕರು ಈ ಬದಲಾವಣೆಯನ್ನು ಗಮನಿಸಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Author

ANU News

Follow Me
Other Articles
Previous

Fresh Fire Breaks Out in Hills Near Badrinath Dham, Smoke Engulfs Area

Next

Karnataka to Introduce State-Level Question Papers for 1st PUC Exams from 2027

Recent Posts

  • ‘Joyous Eid’ Phrase in Diwali Wish Sparks Row Across Political Circles
  • ದೀಪಾವಳಿಯನ್ನು ‘ಸಂತಸದ ಈದ್’ ಎಂದ ಖರ್ಗೆಗೆ ಬಿಜೆಪಿ ತರಾಟೆ; ಕಾಂಗ್ರೆಸ್ ಸಮರ್ಥನೆ
  • TDP-Led NDA Sweeps Andhra Local Body Polls
  • ಆಂಧ್ರ ಸ್ಥಳೀಯ ಸಂಸ್ಥೆ ಚುನಾವಣೆ: ಟಿಡಿಪಿ ನೇತೃತ್ವದ ಎನ್‌ಡಿಎಗೆ ಭರ್ಜರಿ ಜಯ
  • Seven Killed, 112 Injured in Train Collision in Egypt
Copyright 2026 — ANU News. All rights reserved. Blogsy WordPress Theme