Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

By Anu News
June 12, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ.

ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.

ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅದರಂತೆ ನಮ್ಮ ಹಿರಿಯ ನಾಯಕರಾದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನವೇ ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದರು.

ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್ ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಅನ್ನು ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ಹಣ ಪಾವತಿ ಮಾಡಿ ಬಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ವಾಪಸ್ ನೀಡಲಾಗುವುದು ಎಂದು ತಿಳಿಸಿದ ಬೈರತಿ ಸುರೇಶ್ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

Author

Anu News

Follow Me
Other Articles
Previous

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

Next

ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • MM Hills temple hundi collections cross ₹3.37 crore in 41 days
    • ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ
    • Karnataka CM Seeks Centre’s Approval for 13 Key Projects, Meets MPs in New Delhi
    • ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ
    • ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ
    Copyright 2026 — ANU News. All rights reserved. Blogsy WordPress Theme