Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

KEA ಸಿಇಟಿ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ; ಆ.24ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

By ANU News
August 24, 2026 1 Min Read
0

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ UGCET-2026 ಕೋರ್ಸ್‌ಗಳ ಎರಡನೇ ಸುತ್ತಿನ ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ.

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್, ಬಿ-ಫಾರ್ಮಾ, ಡಿ-ಫಾರ್ಮಾ, ಬಿಪಿಟಿ, ಬಿಪಿಒ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ಸೇರಿದಂತೆ ವಿವಿಧ ಕೋರ್ಸ್‌ಗಳ ಸೀಟು ಹಂಚಿಕೆ ವಿವರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಇದರ ಜೊತೆಗೆ UGNEET-2026 ಅಡಿಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನೂ ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಆ.24ರ ಸಂಜೆ 4ರವರೆಗೆ ಅವಕಾಶ

ಸೀಟು ಹಂಚಿಕೆಯಲ್ಲಿ ಯಾವುದೇ ಆಕ್ಷೇಪಣೆಗಳಿದ್ದರೆ ವಿದ್ಯಾರ್ಥಿಗಳು ಆಗಸ್ಟ್ 24ರ ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು ಎಂದು KEA ತಿಳಿಸಿದೆ.

ಇದು ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವಾಗಿರುವುದರಿಂದ, ಪ್ರಸ್ತುತ ಹಂಚಿಕೆಯಾಗಿರುವ ಕಾಲೇಜಿನಲ್ಲಿ ಈಗಲೇ ಪ್ರವೇಶ ಪಡೆಯಲು ಅವಕಾಶವಿಲ್ಲ. ವಿದ್ಯಾರ್ಥಿಗಳು ಅಂತಿಮ ಫಲಿತಾಂಶಕ್ಕಾಗಿ ಕಾಯಬೇಕು.

ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು KEA ಸಾಮಾಜಿಕ ಮಾಧ್ಯಮ X ಮೂಲಕ ತಿಳಿಸಿದೆ.

Author

ANU News

Follow Me
Other Articles
Previous

‘Toxic’ pre-release event mishap: Cyberabad police file FIR after four injured

Next

KEA CET seat allotment provisional results announced; objections allowed till August 24

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Law and order has collapsed in Karnataka’: BJP demands Priyank Kharge’s resignation
    • ಉದ್ಯಾನವನ ಜಾಗ ಬಳಕೆ ಸಂಬಂಧ ಕಾನೂನು ಬದಲಾವಣೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ
    • ‘Green parks are not for sale’: Tejaswi Surya opposes law change on Bengaluru park land
    • Delhi car crash leaves six injured, including Belagavi MLA Abhay Patil
    • ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ
    Copyright 2026 — ANU News. All rights reserved. Blogsy WordPress Theme