Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಧಾರ್ಮಿಕ

ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

By ANU News
August 28, 2026 1 Min Read
0

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಸಹಸ್ರಾರು ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದರು.

ಕ್ಷೇತ್ರದಲ್ಲಿ ಬೆಳಗ್ಗೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಬಳಿಕ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಕಲಶ ಪ್ರತಿಷ್ಠಾಪನೆ, ಲಲಿತಾ ಸಹಸ್ರನಾಮ ಪಠಣ, ಭಜನೆ ಹಾಗೂ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಮಧ್ಯಾಹ್ನ ದೇವಿಗೆ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಬಾಗಿನ ನೀಡಲಾಯಿತು. ಸುಮಾರು 10 ಸಾವಿರ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಸಾಯಿರಾಮ್ ಎಚ್.ಎಸ್., ಕಿಶೋರ್ ದಂಡೆಕೇರಿ, ಕೃತೀನ್ ಧೀರಜ್ ಅಮೀನ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ, ಸದಸ್ಯರಾದ ಪಿ.ಕೆ. ಗೌರವಿ ರಾಜಶೇಖರ್, ಲತೀಶ್ ಸುವರ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

Madhya Pradesh bus crash: Bengaluru police inspector among 4 killed, 11 injured

Next

Varamahalakshmi puja draws thousands of women at Mangaluru’s Kudroli temple

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Penguin India pulls out of Sonia Gandhi memoir project
    • ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ
    • Kumaraswamy’s allegations are ‘opportunistic politics’: KPCC’s Ramesh Babu
    • ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ
    • Varamahalakshmi puja draws thousands of women at Mangaluru’s Kudroli temple
    Copyright 2026 — ANU News. All rights reserved. Blogsy WordPress Theme