Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

By Anu News
June 12, 2026 2 Min Read
0

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು, ಯುನಿಸೆಕ್ಸ್ ಸಲೂನ್‌ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಮಂಗಳೂರಿನ ಮಾಜಿ ಸರ್ಕಾರಿ ವಕೀಲ ಮನೋರಾಜ್ ರಾಜೀವ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಆಯೋಗ ತನ್ನ 76ನೇ ವರದಿಯಲ್ಲಿ ಈ ಶಿಫಾರಸುಗಳನ್ನು ನೀಡಿದೆ.

ಪ್ರಸ್ತುತ ರಾಜ್ಯದಲ್ಲಿ ಸ್ಪಾ ಮತ್ತು ಮಸಾಜ್ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನೇರವಾಗಿ ನಿಯಂತ್ರಿಸುವ ಸ್ಪಷ್ಟ ಕಾನೂನು ಇಲ್ಲ. ಈ ಹಿನ್ನೆಲೆಯಲ್ಲಿ ಆಯೋಗವು ದೇಶ-ವಿದೇಶಗಳ ಕಾನೂನು ಮಾದರಿಗಳನ್ನು ಅಧ್ಯಯನ ನಡೆಸಿದ್ದು, ವಿಶೇಷವಾಗಿ ಸಿಂಗಾಪುರ್, ಅಮೆರಿಕದ ಹಲವು ರಾಜ್ಯಗಳು ಹಾಗೂ ಫಿಲಿಪ್ಪೀನ್ಸ್‌ನಲ್ಲಿ ಜಾರಿಯಲ್ಲಿರುವ ನಿಯಮಾವಳಿಗಳನ್ನು ಪರಿಶೀಲಿಸಿದೆ.

ಕಾನೂನು ಆಯೋಗವು ಗ್ರೇಟರ್ ಬೆಂಗಳೂರು ಗವರ್ನನ್ಸ್ ಕಾಯ್ದೆ-2024ಕ್ಕೆ ತಿದ್ದುಪಡಿ ತಂದು, ಆಯುರ್ವೇದ ಆರೋಗ್ಯ ಕೇಂದ್ರಗಳು, ಸ್ಪಾ, ಯುನಿಸೆಕ್ಸ್ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು ಮತ್ತು ಜಿಮ್‌ಗಳಿಗೆ ಕಡ್ಡಾಯ ಪರವಾನಗಿ ವ್ಯವಸ್ಥೆ ಜಾರಿಗೆ ತರಲು ಶಿಫಾರಸು ಮಾಡಿದೆ. ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದರೆ 10 ಸಾವಿರ ರೂಪಾಯಿವರೆಗೆ ದಂಡ ವಿಧಿಸುವ ಹಾಗೂ ಮರು ಉಲ್ಲಂಘನೆಯಾದರೆ ಪರವಾನಗಿಯನ್ನು ರದ್ದುಪಡಿಸುವ ಅಧಿಕಾರವನ್ನು ಆಯುಕ್ತರಿಗೆ ನೀಡುವಂತೆ ಸಲಹೆ ನೀಡಲಾಗಿದೆ.

ಪ್ರಸ್ತಾವಿತ ಮಾದರಿ ನಿಯಮಾವಳಿಗಳ ಪ್ರಕಾರ, ಸ್ಪಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಲೈಂಗಿಕ ಚಟುವಟಿಕೆ ಸಂಪೂರ್ಣ ನಿಷೇಧವಾಗಿರಲಿದೆ. ಪುರುಷ ಮತ್ತು ಮಹಿಳೆಯರ ವಿಭಾಗಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಗ್ರಾಹಕರ ಗುರುತಿನ ಚೀಟಿ ದಾಖಲೆ ಕಡ್ಡಾಯವಾಗಿದ್ದು, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕನಿಷ್ಠ ಮೂರು ತಿಂಗಳು ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು. ಬೆಳಗ್ಗೆ 9ರಿಂದ ರಾತ್ರಿ 9 ಗಂಟೆಯವರೆಗೆ ಮಾತ್ರ ಕಾರ್ಯಾಚರಣೆಗೆ ಅವಕಾಶ ನೀಡುವ ಪ್ರಸ್ತಾಪವೂ ಇದೆ.

ಇದರ ಜೊತೆಗೆ, ಮಸಾಜ್ ಸೇವೆ ನೀಡುವ ಸಿಬ್ಬಂದಿಗೆ ಮಾನ್ಯತೆ ಪಡೆದ ಪ್ರಮಾಣಪತ್ರ ಅಥವಾ ಡಿಪ್ಲೊಮಾ ಹೊಂದಿರುವುದು ಕಡ್ಡಾಯವಾಗಲಿದೆ. ಮಾಲೀಕರು ಹಾಗೂ ಸಿಬ್ಬಂದಿಗೆ ಪೊಲೀಸ್ ಪರಿಶೀಲನೆ ಮತ್ತು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ (PCC) ಅಗತ್ಯವಾಗಲಿದೆ.

ಕಾನೂನು ಆಯೋಗದ ಪ್ರಕಾರ, ಈ ಕ್ರಮಗಳಿಂದ ಉದ್ಯಮದಲ್ಲಿ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ. ಅಲ್ಲದೆ, ಯೋಗ, ಆಯುರ್ವೇದ, ನೈಸರ್ಗಿಕ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ಕ್ಷೇತ್ರದ ಪರಿಣಿತರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವಕೀಲರ ಬಹುಕಾಲದ ಆಗ್ರಹ:

ರಾಜ್ಯದಲ್ಲಿ Spa ಕೇಂದ್ರಗಳ ಮೇಲೆ ಪೊಲೀಸರು ಆಗಾಗ್ಗೆ ದಾಳಿ ನಡೆಸುತ್ತಿರುವ ಸನ್ನಿವೇಶಗಳು ಮರುಕಳಿಸುತ್ತಿವೆ. ಮಸಾಜ್ ಹಾಗೂ ಸ್ಪಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕಾನೂನೇ ಇಲ್ಲದಿರುವಾಗ ಅಕ್ರಮ ಎಂಬ ವ್ಯಾಖ್ಯಾನವೂ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸರು ಮಸಾಜ್ ಹಾಗೂ ಸ್ಪಾ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆಗಳೂ ಅನೈತಿಕವಾಗುತ್ತದೆ ಎಂದು ಮನೋರಾಜ್ ರಾಜೀವ್ ಅವರು ಸರ್ಕಾರದ ಗಮನಸೆಳೆದಿದ್ದರು. 21.08.2025ರಂದು ಮಂಗಳೂರಿನಲ್ಲಿ ವಕೀಲರಾದ ಶಿಶಿರ್ ಭಂಡಾರಿ, ರೋಶನಿ ಸೊರಬ್, ನಾದಿನಿ ಅಖಿಲ್ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ,ಕೇರಳ ರಾಜ್ಯದಲ್ಲಿ ಈ ಸಂಬಂಧ ಕಾನೂನು ಜಾರಿಯಲ್ಲಿದೆ. ಆಯುರ್ವೇದಿಕ್, ಮಸಾಜ್, ಸ್ಪಾ, ಹೇರ್ ಕೇರ್ ಸಹಿತ ಹೆಲ್ತ್ ಕೇರ್ ಸೆಂಟರ್ ಗಳಿಗೆ ಪರವಾನಿಗೆ ನೀಡಲು ಹಾಗೂ ಚಟುವಟಿಕೆಗಳನ್ನು ನಿಯಂತ್ರಣ ವ್ಯಾಪ್ತಿಯಲ್ಲಿ ತರಲು ಸೂಕ್ತ ಕಾಯ್ದೆ ಜಾರಿಗೊಳಿಸಿದೆ. ಅದರಂತೆ ಕರ್ನಾಟಕದಲ್ಲೂ ಸೂಕ್ತ ಕಾನೂನು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.

Author

Anu News

Follow Me
Other Articles
Previous

ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

Next

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಹಾರ್ಮುಜ್‌ನಲ್ಲಿ ಇರಾನ್‌ ರಣಕಹಳೆ: 20ಕ್ಕೂ ಹೆಚ್ಚು ಹಡಗುಗಳಿಗೆ ಗುರಿ!
    • Iran expands Hormuz no-go zone as tensions rise, oil prices cross $100
    • ನವೆಂಬರ್ ಚುನಾವಣೆ ಬಳಿಕ ಅಮೆರಿಕ-ಇರಾನ್ ಯುದ್ಧ ಅಂತ್ಯ: ಟ್ರಂಪ್ ಭವಿಷ್ಯ
    • Trump predicts US-Iran war will end ‘immediately’ after November midterm polls
    • ‘People’s trust is bigger than power’: DK Shivakumar marks 100 days as CM
    Copyright 2026 — ANU News. All rights reserved. Blogsy WordPress Theme