Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

10 ಸಾಧಕರಿಗೆ 2026-27ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ

By ANU News
October 25, 2026 1 Min Read
0

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 26ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 10 ಮಂದಿಗೆ 2026-27ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಿಸಲಾಗಿದೆ.

ಮಾಜಿ ಕೆಪಿಎಸ್‌ಸಿ ಸದಸ್ಯ ಜಿ.ಟಿ. ಚಂದ್ರಶೇಖರಪ್ಪ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಸ್ವೀಕರಿಸಿದ 137 ಅರ್ಜಿಗಳನ್ನು ಪರಿಶೀಲಿಸಿ, ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ತೇಜಸ್ವಿ ಕಟ್ಟಿಮನಿ, ಸಾಹಿತ್ಯದಲ್ಲಿ ತಿಪ್ಪಣ್ಣ ಮರಿಕುಂಟೆ, ಸಾಂಸ್ಕೃತಿಕ ಸೇವೆಯಲ್ಲಿ ಆರ್.ಎಂ. ಮುನಿರಾಜು, ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಡಾ. ಚಂದ್ರನಾಯಕ್ ಎಸ್. ಹಾಗೂ ಸಾಮಾಜಿಕ ಸೇವೆಯಲ್ಲಿ ಜೆ.ಪಿ. ರಾಜು, ಶಿವನಗೌಡ ಹೊನ್ನನಗೌಡ ಪಾಟೀಲ, ನಂದಕುಮಾರ ಮಾಲಿ ಪಾಟೀಲ, ಕೇತಮ್ಮ, ಬಿ.ಜಿ. ಕೃಷ್ಣಪ್ಪ ಮತ್ತು ವೆಂಕಟರಾಮ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರಿಗೆ ₹5 ಲಕ್ಷ ನಗದು ಬಹುಮಾನ ಹಾಗೂ 25 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತದೆ. ಪರಿಶಿಷ್ಟ ಪಂಗಡದ ಜನರ ಏಳಿಗೆಗಾಗಿ ಶ್ರಮಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಸಾಧಕರನ್ನು ಗುರುತಿಸುವುದು ಪ್ರಶಸ್ತಿಯ ಉದ್ದೇಶವಾಗಿದೆ.

ಜಯಂತಿಯ ಅಂಗವಾಗಿ ಬೆಂಗಳೂರಿನ ಬಸವನಗುಡಿಯ ಶ್ರೀ ಬೇಡರ ಕಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ವಾಲ್ಮೀಕಿ ಜ್ಯೋತಿ ಮೆರವಣಿಗೆ ಆರಂಭವಾಗಲಿದೆ. ವಿವಿಧ ಸಾಂಸ್ಕೃತಿಕ ಮತ್ತು ಬುಡಕಟ್ಟು ಕಲಾತಂಡಗಳ ಪ್ರದರ್ಶನದೊಂದಿಗೆ ಮೆರವಣಿಗೆ ಸಾಗಲಿದ್ದು, ಶಾಸಕರ ಭವನದ ಮುಂಭಾಗದ ವಾಲ್ಮೀಕಿ ತಪೋವನದಲ್ಲಿರುವ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ. ಬಳಿಕ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Author

ANU News

Follow Me
Other Articles
Previous

‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನಕ್ಕೆ ಮಂಗಳೂರಿನಲ್ಲಿ ಚೈತನ್ಯ ತುಂಬಿದ ಸಿಡಬ್ಲ್ಯುಸಿ ಸದಸ್ಯ ಕಮಲೇಶ್ವರ್ ಪಟೇಲ್

Next

Karnataka Announces Maharshi Valmiki Awards for 10 Achievers for 2026–27

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Karnataka Announces Maharshi Valmiki Awards for 10 Achievers for 2026–27
    • 10 ಸಾಧಕರಿಗೆ 2026-27ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ
    • ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನಕ್ಕೆ ಮಂಗಳೂರಿನಲ್ಲಿ ಚೈತನ್ಯ ತುಂಬಿದ ಸಿಡಬ್ಲ್ಯುಸಿ ಸದಸ್ಯ ಕಮಲೇಶ್ವರ್ ಪಟೇಲ್
    • Vote Bachao, Desh Bachao’: Congress mobilises coastal Karnataka ahead of Delhi rally
    • ಅನುಪಮ್ ಖೇರ್ 556ನೇ ಸಿನಿಮಾ ‘ಔಟ್ ಆಫ್ ಫ್ಯಾಷನ್’; ಸ್ವೀಡಿಷ್-ಬೆಲ್ಜಿಯಂ ಸಹನಿರ್ಮಾಣದ ಚಿತ್ರ
    Copyright 2026 — ANU News. All rights reserved. Blogsy WordPress Theme