Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಹಿಷಾ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶ: ಯದುವೀರ್ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಕಾರ್ಯಕ್ರಮ ನಡೆಸಲಿ ಎಂದ ಸಂಸದ

By Anu News
September 28, 2026 1 Min Read
0

ಮೈಸೂರು: ಮಹಿಷಾ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದ್ದು, ಆದರೆ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಕಾರ್ಯಕ್ರಮ ನಡೆಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ಪ್ರಜೆಗೂ ತನ್ನ ಧಾರ್ಮಿಕ ಆಚರಣೆಗಳನ್ನು ನಡೆಸುವ ಹಕ್ಕನ್ನು ಸಂವಿಧಾನ ನೀಡಿದೆ. ಹೀಗಾಗಿ ಜನರ ಧಾರ್ಮಿಕ ಆಚರಣೆಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಮಹಿಷಾ ದಸರಾ ಆಚರಣೆಯನ್ನು ಯಾರಿಗೂ ತೊಂದರೆ ಅಥವಾ ಹಾನಿಯಾಗದ ರೀತಿಯಲ್ಲಿ ನಡೆಸಬಹುದು. ಈ ವಿಚಾರದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಪುಷ್ಪಾರ್ಚನೆಗೆ ವಿರೋಧ

ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಅವಕಾಶ ನೀಡಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಯದುವೀರ್, “ಅದು ತಾಯಿ ಚಾಮುಂಡೇಶ್ವರಿ ಇರುವ ಕ್ಷೇತ್ರ. ಅಲ್ಲಿ ಯಾಕೆ?” ಎಂದು ಪ್ರಶ್ನಿಸಿದರು.

ಚಾಮುಂಡಿ ಬೆಟ್ಟಕ್ಕೆ ಸಂಬಂಧಿಸಿದ ಧಾರ್ಮಿಕ ಪರಂಪರೆ ಮತ್ತು ನಂಬಿಕೆಗಳನ್ನು ಗೌರವಿಸಬೇಕು. ಧರ್ಮದಲ್ಲಿ ನಡೆದುಕೊಂಡು ಬಂದಿರುವ ಪದ್ಧತಿ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗಬಾರದು ಎಂದು ಅವರು ಹೇಳಿದರು.

ಮಹಿಷಾ ದಸರಾ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿ. ಆದರೆ ಚಾಮುಂಡಿ ಬೆಟ್ಟದ ಪರಂಪರೆ ಹಾಗೂ ಅಲ್ಲಿನ ಧಾರ್ಮಿಕ ನಂಬಿಕೆಗಳ ಬಗ್ಗೆ ಜನಪ್ರತಿನಿಧಿಗಳಾಗಿ ಅಧಿಕಾರಿಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ಯದುವೀರ್ ಹೇಳಿದರು.

ಮಹಿಷಾ ದಸರಾ ಆಚರಣೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡುವ ಬೇಡಿಕೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಚರ್ಚೆ ನಡೆಯುತ್ತಿರುವ ನಡುವೆಯೇ ಸಂಸದರ ಈ ಹೇಳಿಕೆ ಮಹತ್ವ ಪಡೆದಿದೆ.

Author

Anu News

Follow Me
Other Articles
Previous

Mahisha Dasara can be held without hurting religious sentiments: Yaduveer

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮಹಿಷಾ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶ: ಯದುವೀರ್ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಕಾರ್ಯಕ್ರಮ ನಡೆಸಲಿ ಎಂದ ಸಂಸದ
    • Mahisha Dasara can be held without hurting religious sentiments: Yaduveer
    • Nandini milk price hike demand: 11 milk unions report profits
    • ನಂದಿನಿ ಹಾಲಿನ ದರ ಏರಿಕೆಗೆ ಒತ್ತಾಯ 11 ಹಾಲು ಒಕ್ಕೂಟಗಳಿಗೆ ₹39.95 ಕೋಟಿ ಲಾಭ; 5 ಒಕ್ಕೂಟಗಳಿಗೆ ನಷ್ಟ
    • ಅಪಾರ್ಟ್‌ಮೆಂಟ್‌ಗಳಲ್ಲಿ RSS ಕಾರ್ಯಕ್ರಮ: ಪ್ರಿಯಾಂಕ್ ಖರ್ಗೆ ಆಕ್ಷೇಪ
    Copyright 2026 — ANU News. All rights reserved. Blogsy WordPress Theme