Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಪರಿಶಿಷ್ಟ ಪಂಗಡಗಳ ಯೋಜನೆ ಅನುಷ್ಠಾನ ವಿಳಂಬ ಬೇಡ; ಅಧಿಕಾರಿಗಳಿಗೆ ರಘುಮೂರ್ತಿ ತಾಕೀತು

By ANU News
August 18, 2026 1 Min Read
0

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು,ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಮಾತನಾಡಿದ ಸಚಿವ ರಘುಮೂರ್ತಿ ಅವರು, ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವ ಯೋಜನೆಗಳು ಯಾವ ಹಂತದಲ್ಲಿದೆ? ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ನೇರವಾಗಿ ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿರುವುದರಿಂದ ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು ಎಂಬುದನ್ನು ಸಚಿವರು ಸಭೆಯಲ್ಲಿ ಸ್ಪಷ್ಟಪಡಿಸಿದರು.
ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಶೇಷವಾಗಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ, ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ ಅವುಗಳ ಅನುಷ್ಠಾನದಲ್ಲಿ ಸಮನ್ವಯ ಮತ್ತು ವೇಗ ಅಗತ್ಯಎಂದು ಹೇಳಿದರು

ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ
ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Author

ANU News

Follow Me
Other Articles
Previous

Gwalior road accident: 8 killed, over 25 workers injured

Next

No delay in ST welfare schemes, Karnataka Minister Raghumurthy tells officials

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Shouldn’t other governments complete projects you started?’ K’taka Congress hits out at JD(S)
    • ‘ನೀವು ಆರಂಭಿಸಿದ ಯೋಜನೆಗಳನ್ನು ಬೇರೆ ಸರ್ಕಾರಗಳು ಪೂರ್ತಿ ಮಾಡಬಾರದೇ?’; ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಪ್ರಶ್ನೆ
    • MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ
    • Indian Army contingent leaves for Thailand for joint military exercise MAITREE-XV
    • India-US Navy EOD exercise concludes in Kochi
    Copyright 2026 — ANU News. All rights reserved. Blogsy WordPress Theme