Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಂಗಳೂರು ವಿಮಾನ ನಿಲ್ದಾಣದ ಟ್ಯಾಕ್ಸಿ ಸಂಘಟನೆಗಳ ಹೋರಾಟಕ್ಕೆ ಶಕ್ತಿ ತುಂಬಿದ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್

By ANU News
November 21, 2026 1 Min Read
Comments Off on ಮಂಗಳೂರು ವಿಮಾನ ನಿಲ್ದಾಣದ ಟ್ಯಾಕ್ಸಿ ಸಂಘಟನೆಗಳ ಹೋರಾಟಕ್ಕೆ ಶಕ್ತಿ ತುಂಬಿದ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಅವೈಜ್ಞಾನಿಕ ಶುಲ್ಕ ಹಾಗೂ ವಾಹನ ಚಾಲಕರ ಮೇಲಿನ ದಬ್ಬಾಳಿಕೆ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟ್ಯಾಕ್ಸಿ ಸಂಘಟನೆಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶನಿವಾರವೂ ಮುಂದುವರಿಯಲಿದೆ.

ಪ್ರತಿಭಟನಾ ಸಭೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿಗಳಿಗೆ ವಿಧಿಸುತ್ತಿರುವ ಶುಲ್ಕವನ್ನು ತೀವ್ರವಾಗಿ ಖಂಡಿಸಿದರು.

“ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಂಟು ನಿಮಿಷಗಳವರೆಗೆ ಉಚಿತ ಪ್ರವೇಶವಿದ್ದು, ಪಿಕ್‌ಅಪ್ ಮತ್ತು ಡ್ರಾಪ್‌ಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ. ಆದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಾಹನ ಪ್ರವೇಶಿಸಿದ ತಕ್ಷಣ ಡ್ರಾಪ್‌ಗೆ ₹50 ಮತ್ತು ಪಿಕ್‌ಅಪ್‌ಗೆ ₹180 ಶುಲ್ಕ ವಿಧಿಸಲಾಗುತ್ತಿದೆ. ಇದು ಹಗಲು ದರೋಡೆಯಂತಿದೆ. ಮಂಗಳೂರು ಇರುವುದು ಭಾರತದಲ್ಲೇ ಹೊರತು ವಿದೇಶದಲ್ಲಲ್ಲ. ಇಲ್ಲಿ ಇಂತಹ ತಾರತಮ್ಯ ಏಕೆ?” ಎಂದು ಪ್ರಶ್ನಿಸಿದರು.

ಬಿಜೆಪಿ ಶಾಸಕರು ಮತ್ತು ಸಂಸದರು ಪ್ರತಿಭಟನಾ ಸ್ಥಳಕ್ಕೆ ಬಂದು ಬೆಂಬಲ ವ್ಯಕ್ತಪಡಿಸುವ ನಾಟಕವಾಡದೆ, ಅದಾನಿ ಸಂಸ್ಥೆಗೆ ವಿಮಾನ ನಿಲ್ದಾಣವನ್ನು ನೀಡಿದ ಕೇಂದ್ರ ಸರ್ಕಾರದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ಸಮಸ್ಯೆ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆಯೇ ಮತ್ತು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಜನರ ಮುಂದೆ ಸ್ಪಷ್ಟಪಡಿಸಬೇಕು ಎಂದರು.

ಸಾಲ ಮಾಡಿ ಒಂದೆರಡು ಟ್ಯಾಕ್ಸಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿರುವ ಬಡ ಚಾಲಕರ ಬದುಕಿಗೆ ತೊಂದರೆ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಎಚ್ಚರಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ರನ್‌ವೇ ವಿಸ್ತರಣೆ ವಿಚಾರದಲ್ಲಿ ಅದಾನಿ ಸಂಸ್ಥೆಯ ಮೇಲೆ ಒತ್ತಡ ಹೇರಿ ₹40 ಕೋಟಿ ಡೆಪಾಸಿಟ್ ಇಡುವಂತೆ ಮಾಡಿದೆ. ಟ್ಯಾಕ್ಸಿ ಚಾಲಕರ ನ್ಯಾಯಯುತ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಮುಖಂಡರಾದ ಬಿ.ಎಂ. ಭಟ್, ಅಸೋಸಿಯೇಷನ್ ಅಧ್ಯಕ್ಷ ರಘುಪತಿ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

Women’s Safety, Crime Control Top Priorities for Bengaluru Police: Priyank Kharge

Next

Congress President Padmaraj Poojary Backs Taxi Associations’ Protest at Mangaluru Airport

Recent Posts

  • Hiriyur Bypoll: Voters Will Teach Congress a Lesson for Anti-People Policies, Says K’taka BJP MLC Ravi
  • ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಗೆ ಹಿರಿಯೂರು ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ: ಡಾ. ರವಿ ಸಿ.ಟಿ.
  • Congress President Padmaraj Poojary Backs Taxi Associations’ Protest at Mangaluru Airport
  • ಮಂಗಳೂರು ವಿಮಾನ ನಿಲ್ದಾಣದ ಟ್ಯಾಕ್ಸಿ ಸಂಘಟನೆಗಳ ಹೋರಾಟಕ್ಕೆ ಶಕ್ತಿ ತುಂಬಿದ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್
  • Women’s Safety, Crime Control Top Priorities for Bengaluru Police: Priyank Kharge
Copyright 2026 — ANU News. All rights reserved. Blogsy WordPress Theme