ಆನೇಕಲ್ನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್ ರಾಜಕೀಯ?
ಬೆಂಗಳೂರು: ಆನೇಕಲ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಯೋಜನೆಯ ಹಿಂದೆ ಜಮೀನಿನ ಬೆಲೆ ಹೆಚ್ಚಿಸಿ ಕಮಿಶನ್ ಪಡೆಯುವ ಉದ್ದೇಶವಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಪರಿಸರವಾದಿಗಳ…
ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ
ಬೆಂಗಳೂರು: ಕಲಬುರ್ಗಿಯಲ್ಲಿ ಕೋಮುಗಲಭೆ ಮಾಡಿದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೆ ಮತಬ್ಯಾಂಕ್ ರಾಜಕಾರಣ ಮಾಡಿದೆ. ಇದು ರಾಜ್ಯದ ಭದ್ರತೆಗೆ ಅಪಾಯ ತಂದೊಡ್ಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯ…
AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್
ಬೆಂಗಳೂರು: ತಮ್ಮ ಬಗ್ಗೆ AI ತಂತ್ರಜ್ಞಾನ ಬಳಸಿ ನಕಲಿ ಬಿಕಿನಿ ಫೋಟೋಗಳು ಹಾಗೂ ವೀಡಿಯೊಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವವರ ವಿರುದ್ಧ ನಟಿ ರುಕ್ಮಿಣಿ ವಸಂತ್ (Rukmini Vasanth) ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾಂತಾರ ಅಧ್ಯಾಯ-2” ಚಿತ್ರದ ಮೂಲಕ ಗಮನ ಸೆಳೆದಿರುವ ರುಕ್ಮಿಣಿ ವಸಂತ್,…
ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್ನಲ್ಲಿ ಉಳಿದ ಪಂಜಾಬ್ ಕಿಂಗ್ಸ್
ಐಪಿಎಲ್ 2026ರ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವು ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್…
ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ
ಬೆಂಗಳೂರು: ರಾಜ್ಯದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಶೇ.60 ರಷ್ಟು ಹೆಚ್ಚಿಸುವ ಮಹತ್ವದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಸಂತೋಷ್ ಲಾಡ್, “ನಮ್ಮ ಸರ್ಕಾರವು ಕಾರ್ಮಿಕರ…
ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು
ಲೇಹ್: ಲಡಾಖ್ನ ಲೇಹ್ ಸಮೀಪದ ಟ್ಯಾಂಗ್ಸ್ಟೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಘಟನೆ ಮೇ 20ರಂದು ನಡೆದಿದ್ದು, ಘಟನೆಯಲ್ಲಿ ಮೂವರು ಹಿರಿಯ ಸೇನಾ ಅಧಿಕಾರಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸೇನಾ ಮೂಲಗಳ ಪ್ರಕಾರ, ಏಕ ಎಂಜಿನ್ ಹೊಂದಿದ್ದ ‘ಚೀತಾ’…
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27),…
ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04
ನವದೆಹಲಿ: ದೇಶದಲ್ಲಿ ದೀರ್ಘಕಾಲ ಸ್ಥಿರವಾಗಿದ್ದ ಇಂಧನ ದರಗಳಿಗೆ ಇದೀಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರ ತೈಲ ಕಂಪನಿಗಳು ಪೆಟ್ರೋಲ್ ದರವನ್ನು ಲೀಟರ್ಗೆ 87 ಪೈಸೆ ಹಾಗೂ ಡೀಸೆಲ್ ದರವನ್ನು 91 ಪೈಸೆ ಹೆಚ್ಚಿಸಿವೆ. ಇಂಧನ ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹107.14…
ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ
ವಾಷಿಂಗ್ಟನ್: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹವಾಯಿ ರಾಜ್ಯದ ಮಾಜಿ ಡೆಮಾಕ್ರಟಿಕ್ ಕಾಂಗ್ರೆಸ್ ಸದಸ್ಯೆಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್ ಅವರನ್ನು ಕಳೆದ ವರ್ಷ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ…
ರಾಜ್ಯಸಭೆಗೆ ದೇವೇಗೌಡ ಮರುಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ
ಬೆಂಗಳೂರು: ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವ ಕುರಿತು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಚರ್ಚೆಗಳು ಜೋರಾಗಿವೆ. ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಲೆಕ್ಕಾಚಾರ ಪ್ರಕಾರ, ಒಬ್ಬ ಅಭ್ಯರ್ಥಿ ಗೆಲ್ಲಲು…