Skip to content
ANU News
ANU News
  • Home
  • Home
ANU News
ANU News
  • Home
  • Home
Others

PoKನಲ್ಲಿ ಪಾಕಿಸ್ತಾನ ಸೇನಾ ಹೆಲಿಕಾಪ್ಟರ್ ಪತನ; ಸಿಬ್ಬಂದಿ ದುರ್ಮರಣ

By Anu News
June 10, 2026 1 Min Read
0

ಇಸ್ಲಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಮುಜಾಫರಾಬಾದ್ ಸಮೀಪ ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡು, ಅದರಲ್ಲಿದ್ದ ಎಲ್ಲಾ ಸಿಬ್ಬಂದಿ ಮೃತಪಟ್ಟಿದ್ದಾರೆ.

ಐಎಸ್‌ಪಿಆರ್‌ ನೀಡಿರುವ ಮಾಹಿತಿ ಪ್ರಕಾರ, ತುರ್ತು ಕಾರ್ಯಾಚರಣೆಗಾಗಿ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿ ನೆಲಕ್ಕೆ ಅಪ್ಪಳಿಸಿದೆ. ಅಪಘಾತದ ಬಳಿಕ ಇಂಧನ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ.

ದುರಂತದಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ನಾಲ್ಕು ರಿಂದ ಐದು ಮಂದಿ ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಇತ್ತೀಚೆಗೆ PoKಯ ರಾವಲಕೋಟ್ ಮತ್ತು ಮೀರ್‌ಪುರ ಪ್ರದೇಶಗಳಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೇನೆಯು ಕಣ್ಗಾವಲು ಮತ್ತು ಕಾರ್ಯಾಚರಣೆಗಳಿಗೆ ಹೆಲಿಕಾಪ್ಟರ್‌ಗಳನ್ನು ಬಳಸುತ್ತಿತ್ತು. ಈ ಸಂದರ್ಭದಲ್ಲೇ ಸಂಭವಿಸಿದ ಅಪಘಾತವು ಪಾಕಿಸ್ತಾನ ಸೇನೆಗೆ ಹಿನ್ನಡೆಯಾಗಿ ಪರಿಣಮಿಸಿದೆ.

21 Pakistani Army soldiers killed

The Afghan Army shot down a Pakistan Army Aviation Mi-17 helicopter, resulting in heavy losses for the Pakistan Army. pic.twitter.com/hgBdRtwUPI

— Afghanistan Army (@AfganArmyStan) June 10, 2026

Author

Anu News

Follow Me
Other Articles
Previous

ಜೈಪುರ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಬೆಂಕಿ; ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ

Next

ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ
    • ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್
    • PoKನಲ್ಲಿ ಪಾಕಿಸ್ತಾನ ಸೇನಾ ಹೆಲಿಕಾಪ್ಟರ್ ಪತನ; ಸಿಬ್ಬಂದಿ ದುರ್ಮರಣ
    • ಜೈಪುರ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಬೆಂಕಿ; ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ
    • GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ
    Copyright 2026 — ANU News. All rights reserved. Blogsy WordPress Theme