SIR ವಿವಾದ: ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ಟೀಕಾಸ್ತ್ರ
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿರುವುದನ್ನು ಕೇಂದ್ರ ಸಚಿವ ವಿ. ಸೋಮಣ್ಣ ಟೀಕಿಸಿದ್ದಾರೆ. ಈ ಸಂಬಂಧ ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸೋಮಣ್ಣ, ಚುನಾವಣೆಯಲ್ಲಿ ಎದುರಿಸಿದ ಹಿನ್ನಡೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಕಾಂಗ್ರೆಸ್ ಪಕ್ಷ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆಯನ್ನೇ ಏಕೆ ದೂಷಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ. ತನ್ನ ರಾಜಕೀಯ ಸವಾಲುಗಳನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ನಾಯಕತ್ವ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಮೃತಪಟ್ಟವರು, ಬೇರೆಡೆಗೆ ಸ್ಥಳಾಂತರಗೊಂಡವರು ಮತ್ತು ಒಂದೇ ಹೆಸರಿನಲ್ಲಿ ನಡೆದಿರುವ ನಕಲಿ ನೋಂದಣಿಗಳನ್ನು ಮಾತ್ರ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಸೋಮಣ್ಣ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಜಾರಕಿಹೊಳಿ ಅವರ ಹೇಳಿಕೆಗಳು ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಅಭಿಯಾನಕ್ಕೆ ಹಿನ್ನಡೆಯಾಗಿವೆ ಎಂದು ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಸ್‌ಐಆರ್ ಕುರಿತು ಕಾಂಗ್ರೆಸ್ ವ್ಯಕ್ತಪಡಿಸುತ್ತಿರುವ ಆಕ್ಷೇಪಣೆಗಳು ಸ್ವತಃ ಆ ಪಕ್ಷದ ನಾಯಕರ ಹೇಳಿಕೆಗಳಿಗೇ ವಿರುದ್ಧವಾಗಿವೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿರುವುದನ್ನು ಅವರು ಪ್ರಶ್ನಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಈ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸೋಮಣ್ಣ ಈ ಹೇಳಿಕೆ ನೀಡಿದ್ದಾರೆ.
When and what does it take for Mr Rahul Gandhi to realise that it’s him and his party thats the problem and not anything else? Just like a bad workman blames his tools, after 12 years of rejection by Bharat, he still refuses to accept that the nation has written off his arrogant dynast Party.
While Congress plans a protest in Delhi claiming the SIR voter list revision is a scam, their own Karnataka Minister Satish Jarkiholi exposed them, admitting: “No issue with SIR in Karnataka. Only names of people who died, moved away, or had duplicate entries were deleted.”
Can there be a greater humiliation than this? Everything ends in congress even before it starts.
— V. Somanna (@VSOMANNA_BJP) October 29, 2026