Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್; ಬಾಕಿ ವೇತನಕ್ಕೆ ₹170 ಕೋಟಿ ಬಿಡುಗಡೆ

By ANU News
August 15, 2026 1 Min Read
Comments Off on ಸಾರಿಗೆ ನೌಕರರಿಗೆ ಗುಡ್‌ನ್ಯೂಸ್; ಬಾಕಿ ವೇತನಕ್ಕೆ ₹170 ಕೋಟಿ ಬಿಡುಗಡೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬಾಕಿ ವೇತನ ಪಾವತಿಗಾಗಿ ರಾಜ್ಯ ಸರ್ಕಾರ ₹170 ಕೋಟಿ ಬಿಡುಗಡೆ ಮಾಡಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ 15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಈ ಘೋಷಣೆ ಮಾಡಿದರು. ಸಭೆಯಲ್ಲಿ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಯಿತು.

2025ರಲ್ಲಿ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲಾಗಿದ್ದು, ಒಟ್ಟು ₹1,271 ಕೋಟಿ ವೇತನ ಹಿಂಬಾಕಿ ಪಾವತಿಸಬೇಕಿತ್ತು. ಈ ಹಿಂದೆ ಸರ್ಕಾರ ₹450 ಕೋಟಿ ಬಿಡುಗಡೆ ಮಾಡಿತ್ತು. ಇದೀಗ ಬಾಕಿ ಉಳಿದಿದ್ದ ₹821 ಕೋಟಿಯಲ್ಲಿ ಮತ್ತೆ ₹170 ಕೋಟಿ ಬಿಡುಗಡೆ ಮಾಡಲಾಗಿದೆ. ಉಳಿದ ₹651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವುದಾಗಿ ಬೈರತಿ ಸುರೇಶ್ ಭರವಸೆ ನೀಡಿದರು.

ಇದೇ ವೇಳೆ ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸುವುದಾಗಿ ಸಚಿವರು ತಿಳಿಸಿದರು. ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಈ ಆರೋಗ್ಯ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

Author

ANU News

Follow Me
Other Articles
Previous

C.P. Radhakrishnan’s two-day Tamil Nadu visit to include convocation, book launch

Next

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

Recent Posts

  • ಕೆಎಸ್‌ಎನ್‌ಸಿ ಸೇವೆಗಳು ಶೀಘ್ರದಲ್ಲೇ ಆನ್‌ಲೈನ್‌ಗೆ: ಆರೋಗ್ಯ ಸಚಿವ ಯು.ಟಿ. ಖಾದರ್
  • ಬುಡಕಟ್ಟು ಸಮುದಾಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ಸಚಿವ ಟಿ. ರಘುಮೂರ್ತಿ
  • Tribal Welfare: Karnataka minister Raghumurthy Directs Officials to Improve Education, Basic Facilities
  • 2027ರಲ್ಲಿ ಮೊದಲ ಬುಲೆಟ್ ರೈಲು ಸಂಚಾರದ ಗುರಿ; ಮುಂಬೈ–ಅಹಮದಾಬಾದ್ ಕಾರಿಡಾರ್ ಕಾಮಗಾರಿ ಪ್ರಗತಿಯಲ್ಲಿ
  • India’s first bullet train project on track; undersea tunnel, underground Mumbai station take shape
Copyright 2026 — ANU News. All rights reserved. Blogsy WordPress Theme