Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

By ANU News
June 21, 2026 1 Min Read
0

ಕೋಲಾರ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಗೆನ್ನೆರಹಳ್ಳಿ ಗೇಟ್ ಸಮೀಪ ನಡೆದಿದೆ.

ಮೃತರನ್ನು ಕೆಜಿಎಫ್ ನಗರದ ನಿವಾಸಿಗಳಾದ ವಿನಯ್ ಹಾಗೂ ವಿನಾಯಕ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Author

ANU News

Follow Me
Other Articles
Previous

ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

Next

Two killed after bus suffers tyre burst, rams bike in Kolar

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ
    • Bengaluru gets its first ‘Circular Textile Lab’ to turn textile waste into useful products
    • ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ
    • Horror, humour and a mysterious bus: Shine Shetty’s ‘Shankarabharana’ teaser unveiled
    • ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್
    Copyright 2026 — ANU News. All rights reserved. Blogsy WordPress Theme