Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

By ANU News
November 28, 2026 1 Min Read
Comments Off on ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

ನವದೆಹಲಿ: ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ದೆಹಲಿಯ ಸೇವಾ ತೀರ್ಥದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕ್ಷೇತ್ರ ಪುನರ್‌ವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಕೆಲವು ತಿದ್ದುಪಡಿಗಳೊಂದಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

ಕ್ಷೇತ್ರ ಮರುವಿಂಗಡಣೆ ಬಳಿಕ ಯಾವುದೇ ರಾಜ್ಯದ ಲೋಕಸಭಾ ಪ್ರಾತಿನಿಧ್ಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳುವುದು ಹಾಗೂ ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತದಲ್ಲಿ ಬದಲಾವಣೆಯಾಗದಂತೆ ತಿದ್ದುಪಡಿ ರೂಪಿಸುವುದು ಮಸೂದೆಯ ಪ್ರಮುಖ ಉದ್ದೇಶವಾಗಿದೆ.

ಮುಂದಿನ ವಾರ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲೇ ಮಸೂದೆ ಅಂಗೀಕರಿಸಲು ಸರ್ಕಾರ ಸಿದ್ಧತೆ ನಡೆಸಿದೆ.

Author

ANU News

Follow Me
Other Articles
Previous

Union Cabinet Clears Women’s Reservation Bill Linked to Delimitation

Next

Sharad Pawar-Led NCP Faction Backs Delimitation, Calls It Constitutional Necessity

Recent Posts

  • ಶೇ.33ರಷ್ಟು ಮಹಿಳಾ ಮೀಸಲಾತಿ ಐತಿಹಾಸಿಕ ಹೆಜ್ಜೆ; ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯ ದ್ವಿಗುಣವಾಗಲಿದೆ ಎಂದ ಕುಮಾರಸ್ವಾಮಿ
  • CM Shivakumar Interacts with Shepherds, Hears Sheep-Rearing Concerns
  • ಕುರಿಗಾಹಿಗಳೊಂದಿಗೆ ಆತ್ಮೀಯ ಮಾತುಕತೆ; ಕುರಿ ಸಾಕಾಣಿಕೆಯ ಸಮಸ್ಯೆ, ಅಹವಾಲು ಆಲಿಸಿದ ಮುಖ್ಯಮಂತ್ರಿ
  • ಹಾವೇರಿ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸರ ಹೆಸರು: ಮುಖ್ಯಮಂತ್ರಿ ಘೋಷಣೆ
  • K’taka BJP’s Support for ASHA Workers’ Protest a Political Stunt, Says KPCC Leader Ramesh Babu
Copyright 2026 — ANU News. All rights reserved. Blogsy WordPress Theme