Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಗೆ ಹಿರಿಯೂರು ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ: ಡಾ. ರವಿ ಸಿ.ಟಿ.

By ANU News
November 21, 2026 2 Min Read
Comments Off on ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಗೆ ಹಿರಿಯೂರು ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ: ಡಾ. ರವಿ ಸಿ.ಟಿ.

ಹಿರಿಯೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ, ಬರ ನಿರ್ವಹಣೆಯ ವೈಫಲ್ಯ ಹಾಗೂ ಜನವಿರೋಧಿ ಆಡಳಿತಕ್ಕೆ ಹಿರಿಯೂರು ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಕರೆ ನೀಡಿದರು.

ಬಿಜೆಪಿ ಹಿರಿಯೂರು ಮಂಡಲದ ವತಿಯಿಂದ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯ ಫಲಿತಾಂಶದಿಂದ ಸರ್ಕಾರ ತಕ್ಷಣ ಬದಲಾಗದಿದ್ದರೂ, ಜನರ ಆಕ್ರೋಶವನ್ನು ವ್ಯಕ್ತಪಡಿಸಲು ಇದು ಸೂಕ್ತ ಅವಕಾಶ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಗತ್ಯ ವಸ್ತುಗಳು ಮತ್ತು ಸೇವೆಗಳ ದರ ಹೆಚ್ಚಾಗಿದೆ. ಜನನ ಮತ್ತು ಮರಣ ಪ್ರಮಾಣಪತ್ರದ ಶುಲ್ಕ ₹5ರಿಂದ ₹50ಕ್ಕೆ, ಪಹಣಿ ದರ ₹15ರಿಂದ ₹30ಕ್ಕೆ ಏರಿಕೆಯಾಗಿದೆ. ₹20ರ ಬಾಂಡ್ ಪೇಪರ್‌ಗಳ ದರ ₹100, ₹200 ಮತ್ತು ₹500ಕ್ಕೆ ತಲುಪಿದೆ. ಹಾಲು, ಅಡುಗೆ ಎಣ್ಣೆ ಸೇರಿದಂತೆ ಹಲವು ವಸ್ತುಗಳ ಬೆಲೆಯೂ ಹೆಚ್ಚಾಗಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಜನರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಬಡವರ ಮನೆ ತಲುಪುತ್ತಿರುವುದು ಕೇಂದ್ರ ಸರ್ಕಾರ ನೀಡುವ ಐದು ಕೆ.ಜಿ. ಅಕ್ಕಿ ಮಾತ್ರ. ಬರಪೀಡಿತ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಸಮರ್ಪಕ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಆರೋಪಿಸಿದರು. ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮತ್ತು ಒಳಮೀಸಲಾತಿ ವಿಚಾರದಲ್ಲಿಯೂ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅಕ್ರಮ ವರ್ಗಾವಣೆ ಆರೋಪಕ್ಕೆ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರಿಗೆ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರದ ಖಜಾನೆ ಖಾಲಿಯಾಗಿದೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆಯನ್ನು ಟೀಕಿಸಿದ ಅವರು, ಅಧಿಕಾರದಲ್ಲಿರುವವರ ಖಜಾನೆ ತುಂಬುತ್ತಿದೆ ಎಂದು ಆರೋಪಿಸಿದರು.

ಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿಗಿಂತ ಎನ್‌ಡಿಎ ಅಭ್ಯರ್ಥಿಯ ಗೆಲುವು ಮುಖ್ಯ. ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿವೆ. ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ, ತಿಪ್ಪಾರೆಡ್ಡಿ ಅವರ ಮಾರ್ಗದರ್ಶನದಲ್ಲಿ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದರು.

ಇದು ಹಣಬಲ ಮತ್ತು ಮತದಾರರ ಸ್ವಾಭಿಮಾನದ ನಡುವಿನ ಹೋರಾಟ. ಹಣದಿಂದ ಜನರ ಸ್ವಾಭಿಮಾನವನ್ನು ಖರೀದಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಮತದಾರರು ನೀಡಬೇಕು. ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಗೋವಿಂದ ಕಾರಜೋಳ, ತಿಪ್ಪಾರೆಡ್ಡಿ, ಪ್ರೀತಂ ಗೌಡ, ಕುಮಾರಸ್ವಾಮಿ, ಧೀರಜ್ ಮುನಿರಾಜು, ಅಭಿನಂದನ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

Congress President Padmaraj Poojary Backs Taxi Associations’ Protest at Mangaluru Airport

Next

Hiriyur Bypoll: Voters Will Teach Congress a Lesson for Anti-People Policies, Says K’taka BJP MLC Ravi

Recent Posts

  • Hiriyur Bypoll: Voters Will Teach Congress a Lesson for Anti-People Policies, Says K’taka BJP MLC Ravi
  • ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಗೆ ಹಿರಿಯೂರು ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ: ಡಾ. ರವಿ ಸಿ.ಟಿ.
  • Congress President Padmaraj Poojary Backs Taxi Associations’ Protest at Mangaluru Airport
  • ಮಂಗಳೂರು ವಿಮಾನ ನಿಲ್ದಾಣದ ಟ್ಯಾಕ್ಸಿ ಸಂಘಟನೆಗಳ ಹೋರಾಟಕ್ಕೆ ಶಕ್ತಿ ತುಂಬಿದ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್
  • Women’s Safety, Crime Control Top Priorities for Bengaluru Police: Priyank Kharge
Copyright 2026 — ANU News. All rights reserved. Blogsy WordPress Theme