Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಕ್ರೀಡೆ

ಐರ್ಲೆಂಡ್ ವಿರುದ್ಧ ಭಾರತಕ್ಕೆ ಮತ್ತೊಂದು ಸೋಲು; ಸರಣಿ ಗೆದ್ದ ಆತಿಥೇಯರು

By ANU News
June 29, 2026 1 Min Read
0

ಡಬ್ಲಿನ್: ಭಾರತ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ 1 ರನ್‌ಗಳ ರೋಚಕ ಗೆಲುವು ಸಾಧಿಸಿ, ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಎರಡೂ ಪಂದ್ಯಗಳಲ್ಲಿ ಭಾರತ ವಿರುದ್ಧ ಜಯ ಸಾಧಿಸುವ ಮೂಲಕ ಆತಿಥೇಯರು ಸರಣಿಯನ್ನು ಗೆದ್ದಿದ್ದಾರೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ, ಐರ್ಲೆಂಡ್ ತಂಡವನ್ನು 20 ಓವರ್‌ಗಳಲ್ಲಿ 8 ವಿಕೆಟ್‌ಗೆ 154 ರನ್‌ಗಳಿಗೆ ಕಟ್ಟಿಹಾಕಿತು.

155 ರನ್ ಗುರಿ ಬೆನ್ನತ್ತಿದ ಭಾರತ ಆರಂಭದಲ್ಲೇ ಆಘಾತ ಅನುಭವಿಸಿತು. ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಶೂನ್ಯಕ್ಕೆ ಔಟಾದರೆ, ಇಶಾನ್ ಕಿಶನ್ 12 ಮತ್ತು ಶ್ರೇಯಸ್ ಅಯ್ಯರ್ 10 ರನ್ ಗಳಿಸಿ ನಿರಾಸೆ ಮೂಡಿಸಿದರು.

ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ 1 ರನ್ ಅಂತರದಿಂದ ಸೋಲು ಕಂಡಿತು. ಈ ಗೆಲುವಿನೊಂದಿಗೆ ಐರ್ಲೆಂಡ್ ಐತಿಹಾಸಿಕ ಸರಣಿ ಜಯ ದಾಖಲಿಸಿದೆ.

Author

ANU News

Follow Me
Other Articles
Previous

ರಾಜ್ಯದಲ್ಲಿ ಬರಗಾಲ ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

Next

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
    • Sugar prices spark political row: Kharge questions Centre, govt rejects ethanol link
    • 3. Pellet gun case: Priyank Kharge questions delay in filing FIR
    • ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ
    • ‘Phoenix’ film row: Om Prakash Rao accused of not returning ₹3.85 crore
    Copyright 2026 — ANU News. All rights reserved. Blogsy WordPress Theme