Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
Others

ಕ್ಯಾಲಿಫೋರ್ನಿಯಾದಲ್ಲಿ ಬಿ-52 ಬಾಂಬರ್ ಪತನ, 8 ಮಂದಿ ಸಾವು

By Anu News
June 16, 2026 1 Min Read
0

ಕ್ಯಾಲಿಫೋರ್ನಿಯಾ: ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಅಮೆರಿಕ ವಾಯುಪಡೆಯ ಪ್ರಮುಖ ಕೇಂದ್ರವಾಗಿರುವ ಎಡ್ವರ್ಡ್ಸ್ ವಾಯುನೆಲೆಯಿಂದ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಬಿ-52 ಸ್ಟ್ರಾಟೋಫೋರ್ಟ್ರೆಸ್ ಬಾಂಬರ್ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಬೆಳಗ್ಗೆ ಸುಮಾರು 11:20ರ ವೇಳೆಗೆ ಈ ದುರಂತ ಸಂಭವಿಸಿದೆ. ದಿನನಿತ್ಯದ ಪರೀಕ್ಷಾ ಕಾರ್ಯಾಚರಣೆಯ ಭಾಗವಾಗಿ ಹಾರಾಟ ನಡೆಸುತ್ತಿದ್ದ ವಿಮಾನವು ಟೇಕ್‌ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿಮಾನದಲ್ಲಿದ್ದ ಯಾರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬೆನ್ನಲ್ಲೇ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿವೆ. ದುರಂತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾಗಿದ್ದು, ಘಟನೆ ಕುರಿತು ಸಮಗ್ರ ತನಿಖೆ ಆರಂಭಿಸಲಾಗಿದೆ.

ಘಟನೆಯ ನಂತರ ಎಡ್ವರ್ಡ್ಸ್ ವಾಯುನೆಲೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಅಲ್ಲದೆ ಒಳಬರುವ ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದ್ದು, ರಕ್ಷಣಾ ಹಾಗೂ ತನಿಖಾ ಕಾರ್ಯಾಚರಣೆಗೆ ಆದ್ಯತೆ ನೀಡಲಾಗಿದೆ.

A U.S. Air Force B-52 bomber reportedly crashed shortly after takeoff from Edwards Air Force Base, triggering a major emergency response. Thick black smoke was seen rising from the crash site as rescue and firefighting crews rushed to the scene. (Representative Video) pic.twitter.com/DmwPzFz8QM

— Defence Journal (@Defence_Journl) June 16, 2026

ಬೋಯಿಂಗ್ ನಿರ್ಮಿತ ಬಿ-52 ಸ್ಟ್ರಾಟೋಫೋರ್ಟ್ರೆಸ್ ವಿಶ್ವದ ಅತ್ಯಂತ ಶಕ್ತಿಶಾಲಿ ದೀರ್ಘ ಶ್ರೇಣಿಯ ಬಾಂಬರ್ ವಿಮಾನಗಳಲ್ಲಿ ಒಂದಾಗಿದ್ದು, 1955ರಿಂದ ಅಮೆರಿಕ ವಾಯುಪಡೆಯ ಸೇವೆಯಲ್ಲಿದೆ. ಸಾಂಪ್ರದಾಯಿಕ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ಈ ವಿಮಾನ ಅಮೆರಿಕದ ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ವದ ಸ್ಥಾನ ಪಡೆದಿದೆ.

ಇನ್ನು ಎಡ್ವರ್ಡ್ಸ್ ವಾಯುನೆಲೆ ಅಮೆರಿಕದ ವಿಮಾನಗಳ ಪರೀಕ್ಷೆ, ಸಂಶೋಧನೆ ಮತ್ತು ಅಭಿವೃದ್ಧಿಗೆ ಪ್ರಮುಖ ಕೇಂದ್ರವಾಗಿದ್ದು, ಈ ದುರಂತ ವಾಯುಪಡೆಯ ವಲಯದಲ್ಲಿ ಆತಂಕ ಮೂಡಿಸಿದೆ.

Author

Anu News

Follow Me
Other Articles
Previous

ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

Next

ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme