Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ

By Anu News
June 14, 2026 1 Min Read
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.

ಯೋಜನೆಗಳ ದುರ್ಬಳಕೆಯನ್ನು ತಡೆಗಟ್ಟುವುದು ಹಾಗೂ ನೈಜ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ನೂರಾರು ಕೋಟಿ ರೂಪಾಯಿ ಹಣ ಈಗಾಗಲೇ ಮೃತಪಟ್ಟಿರುವ ವ್ಯಕ್ತಿಗಳ ಖಾತೆಗಳಿಗೆ ಜಮೆಯಾಗಿರುವುದು ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ. ಅಲ್ಲದೆ, ಹಲವು ಫಲಾನುಭವಿಗಳ ಬ್ಯಾಂಕ್ ಖಾತೆ ಮಾಹಿತಿಯಲ್ಲೂ ಸ್ಪಷ್ಟತೆ ಅಗತ್ಯವಿರುವುದರಿಂದ ಮರು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದೇ ವೇಳೆ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಸುಮಾರು 1.64 ಲಕ್ಷ ಫಲಾನುಭವಿಗಳೂ ಸಹ ಮರು ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿಗಳ ಮರು ಪರಿಶೀಲನೆಯ ಬಳಿಕ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

Author

Anu News

Follow Me
Other Articles
Previous

ರಾಹುಲ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಸುಲಭ ಜಯ

Next

ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Piyush Goyal, Scotland First Minister Discuss India–Scotland Trade Ties
    • ಪಂಜಾಬ್‌ನಲ್ಲಿ ಗಡಿ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು; ಏಳು ಆರೋಪಿಗಳ ಬಂಧನ
    • ರಾಹುಲ್ ಗಾಂಧಿ ವಿದೇಶ ಪ್ರವಾಸ ಕುರಿತ ಬಿಜೆಪಿ ಹೇಳಿಕೆಗೆ ಶಶಿ ತರೂರ್ ತರಾಟೆ
    • Amritsar Police Bust Cross-Border Smuggling Network, Seven Arrested
    • Over 50 Village Deities Feature in Tumakuru Dasara Jamboo Savari
    Copyright 2026 — ANU News. All rights reserved. Blogsy WordPress Theme