Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

By ANU News
August 15, 2026 1 Min Read
0

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‌ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಯೋಜನೆಗಳ ಕುರಿತು ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳಲ್ಲಿ ಹೊಂದಾಣಿಕೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳ ಕುರಿತು ಶ್ವೇತಪತ್ರ ಹೊರಡಿಸಿ ಸದನಕ್ಕೆ ನಿಖರ ಮಾಹಿತಿ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಶಕ್ತಿ ಯೋಜನೆಯಡಿ 3.5 ಕೋಟಿ ಮಹಿಳೆಯರು 796 ಕೋಟಿ ಉಚಿತ ಪ್ರಯಾಣ ಮಾಡಿದ್ದು, ಮೂರು ವರ್ಷಗಳಲ್ಲಿ ₹14,875 ಕೋಟಿ ವೆಚ್ಚವಾಗಿದೆ ಎಂದು ಹೇಳಿದ್ದಾರೆ. ಆದರೆ ಜೂನ್ 11ರಂದು ಮುಖ್ಯಮಂತ್ರಿಗಳ ಅಧಿಕೃತ ಎಕ್ಸ್ ಖಾತೆಯಲ್ಲಿ 753.7 ಕೋಟಿ ಉಚಿತ ಪ್ರಯಾಣಕ್ಕೆ ₹19,771 ಕೋಟಿ ಮೌಲ್ಯದ ಟಿಕೆಟ್ ನೀಡಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಮೇ 25ರ ಪೋಸ್ಟ್‌ನಲ್ಲಿ 726 ಕೋಟಿ ಪ್ರಯಾಣಕ್ಕೆ ₹18,943 ಕೋಟಿ ವೆಚ್ಚವಾಗಿದೆ ಎಂದು ತಿಳಿಸಲಾಗಿತ್ತು. ಈ ಅಂಕಿ-ಅಂಶಗಳ ನಡುವೆ ಸಾವಿರಾರು ಕೋಟಿ ರೂಪಾಯಿ ವ್ಯತ್ಯಾಸವಿದ್ದು, ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇದೇ ರೀತಿ ಗೃಹಲಕ್ಷ್ಮಿ ಯೋಜನೆಯಲ್ಲೂ ಅಂಕಿ-ಅಂಶಗಳಲ್ಲಿ ವ್ಯತ್ಯಾಸವಿದೆ. ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ 1.28 ಕೋಟಿ ಮಹಿಳಾ ಫಲಾನುಭವಿಗಳಿಗೆ ₹76,908 ಕೋಟಿಗೂ ಅಧಿಕ ಹಣ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ ಮೇ 26ರ ಸರ್ಕಾರದ ಪೋಸ್ಟ್‌ನಲ್ಲಿ 1.24 ಕೋಟಿ ಫಲಾನುಭವಿಗಳಿಗೆ ₹74,216 ಕೋಟಿ ನೀಡಲಾಗಿದೆ ಎಂದು ಹೇಳಲಾಗಿತ್ತು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಂಕಿ-ಅಂಶಗಳ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ 31 ಕಂತುಗಳಲ್ಲಿ 1.24 ಕೋಟಿ ಮಹಿಳೆಯರಿಗೆ ₹74,650 ಕೋಟಿ ನೀಡಲಾಗಿದೆ. ಹೀಗಾಗಿ ಸರ್ಕಾರದ ವಿವಿಧ ಮೂಲಗಳ ಅಂಕಿ-ಅಂಶಗಳಲ್ಲೇ ಗೊಂದಲವಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಸುಮಾರು ₹5,000 ಕೋಟಿ ಹಣ ಇನ್ನೂ ಬಿಡುಗಡೆಯಾಗಿದೆಯೇ ಎಂಬ ಬಗ್ಗೆಯೂ ಸರ್ಕಾರ ಸ್ಪಷ್ಟನೆ ನೀಡಿಲ್ಲ. ಎಲ್ಲ ಗ್ಯಾರಂಟಿ ಯೋಜನೆಗಳ ವೆಚ್ಚ, ಫಲಾನುಭವಿಗಳು ಹಾಗೂ ಬಿಡುಗಡೆಯಾದ ಹಣದ ಕುರಿತು ನಿಖರ ಮಾಹಿತಿ ನೀಡಬೇಕು. ಅಂಕಿ-ಅಂಶಗಳ ಗೊಂದಲ ನಿವಾರಿಸಲು ಸರ್ಕಾರ ಶ್ವೇತಪತ್ರ ಮಂಡಿಸಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

Author

ANU News

Follow Me
Other Articles
Previous

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ
    • ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ
    • Mekedatu project gets push; Karnataka targets foundation stone by August 2027
    • ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ
    • KSRTC employees get ₹170 crore salary dues relief ahead of Varamahalakshmi
    Copyright 2026 — ANU News. All rights reserved. Blogsy WordPress Theme