Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ

By ANU News
August 11, 2026 1 Min Read
0

ನವದೆಹಲಿ/ರಾಂಚಿ: ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಬಳಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸ್ ಕ್ರಮ ಖಂಡಿಸಿ ಬಿಜೆಪಿ ಆಗಸ್ಟ್‌ 11ರಂದು ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದೆ.

ನೇಮಕಾತಿ ಅಕ್ರಮದ ವಿರುದ್ಧ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಟನೆ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದಕ್ಕೆ ತೀವ್ರ ರಾಜಕೀಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವುದನ್ನು ಖಂಡಿಸಬೇಕು. ವಿದ್ಯಾರ್ಥಿಗಳಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಇಂತಹ ಸಮಸ್ಯೆಗಳನ್ನು ಮಾತುಕತೆಯ ಮೂಲಕವೇ ಪರಿಹರಿಸಬೇಕು ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಹೇಳಿದ್ದಾರೆ.

ರಾಂಚಿಯಲ್ಲಿ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಅಭ್ಯರ್ಥಿಗಳ ಪ್ರತಿಭಟನೆ ವೇಳೆ ನಡೆದ ಲಾಠಿಚಾರ್ಜ್ ಕುರಿತು ಪ್ರತಿಕ್ರಿಯಿಸಿರುವ ಅವರು, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ರೀತಿಯ ಹಿಂಸಾತ್ಮಕ ಕ್ರಮವನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆ ಶಾಂತಿಯುತವಾಗಿರುವವರೆಗೆ ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗವನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಜಾರ್ಖಂಡ್ ಸರ್ಕಾರ ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳನ್ನು ತಕ್ಷಣ ಪರಿಹರಿಸಲು ಮುಂದಾಗಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

Author

ANU News

Follow Me
Other Articles
Previous

Jharkhand recruitment row: Students clash with police; Rahul Gandhi condemns lathi-charge

Next

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • TRAI Test Finds Jio Leads Download Speeds in Kerala’s Thrissur District
    • Bengaluru to Host FIBA Women’s Basketball League Asia 2026 from October 20
    • ‘ಪ್ರಜಾಪ್ರಭುತ್ವ ರಕ್ಷಣೆಯ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’: ರಾಹುಲ್ ಗಾಂಧಿ
    • ಪದವೀಧರ ಮತದಾರರು ಸಂವಿಧಾನಾತ್ಮಕ ಸಂಸ್ಥೆಗಳ ರಕ್ಷಣೆಗೆ ಆದ್ಯತೆ ನೀಡಲಿ: ಡಾ. ರವಿ ಸಿ.ಟಿ.
    • BJP MLC CT Ravi criticises K’taka Congress government over welfare schemes and rising costs
    Copyright 2026 — ANU News. All rights reserved. Blogsy WordPress Theme