Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ

By ANU News
August 31, 2026 1 Min Read
0

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದರು.

ನವದೆಹಲಿಯ ಕರ್ನಾಟಕ ಭವನದಲ್ಲಿರುವ ನಿವಾಸಿ ಆಯುಕ್ತರಿಂದ ರಕ್ಷಣಾ ಕಾರ್ಯಾಚರಣೆಯ ಕುರಿತು ಸಮಗ್ರ ಮಾಹಿತಿ ಪಡೆದ ಅವರು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ 54 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ ಎಂದು ಶಿವಕುಮಾರ್ ಮಾಹಿತಿ ನೀಡಿದ್ದಾರೆ.

‘ಕುಟುಂಬಸ್ಥರು ಆತಂಕಪಡಬೇಡಿ’

ನೇಪಾಳದಲ್ಲಿ ಸಿಲುಕಿರುವವರ ಕುಟುಂಬಸ್ಥರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ಸಂತ್ರಸ್ತರ ಕುಟುಂಬಗಳೊಂದಿಗೆ ನಿಂತಿದ್ದು, ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

Author

ANU News

Follow Me
Other Articles
Previous

‘ಆಗಸ್ಟ್‌ನಲ್ಲೇ ನಾಲ್ವರು ರೈತರ ಆತ್ಮಹತ್ಯೆ’; ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ

Next

‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Vice-President C.P. Radhakrishnan inaugurates Aranmula Vallamkali, hails Kerala’s cultural heritage
    • ‘Two faces, one message?’: B.K.Hariprasad targets RSS over Bhagwat’s US remarks
    • ‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ
    • ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ
    • ‘ಆಗಸ್ಟ್‌ನಲ್ಲೇ ನಾಲ್ವರು ರೈತರ ಆತ್ಮಹತ್ಯೆ’; ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ
    Copyright 2026 — ANU News. All rights reserved. Blogsy WordPress Theme