Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಕ್ರೀಡೆದೇಶ

ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

By ANU News
May 18, 2026 1 Min Read
0

ಧರ್ಮಶಾಲಾ: ಐಪಿಎಲ್ 2026 ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ವಿರುದ್ಧ 23 ರನ್‌ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್‌ಗೆ ಪ್ರವೇಶಿಸಿದೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಪೇರಿಸಿತು. ವಿರಾಟ್ ಕೊಹ್ಲಿ (Virat Kohli) 58 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ (Devdutt Padikkal) 45 ರನ್ ಬಾರಿಸಿದರು. ಟಿಮ್ ಡೇವಿಡ್ (Tim David) 28 ರನ್ ಸೇರಿಸಿದರು. ಅಂತಿಮ ಹಂತದಲ್ಲಿ ವೆಂಕಟೇಶ್ ಅಯ್ಯರ್ (Venkatesh Iyer) ಅಜೇಯ 73 ರನ್ ಸಿಡಿಸಿ ತಂಡದ ಮೊತ್ತವನ್ನು ಬೃಹತ್ ಮಟ್ಟಕ್ಕೆ ಕೊಂಡೊಯ್ದರು.

223 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ತಂಡ ಆರಂಭದಿಂದಲೇ ಒತ್ತಡಕ್ಕೆ ಸಿಲುಕಿತು. ಕೋಪರ್ ಕೊನೋಲಿ (Cooper Connolly) 37, ಸೂರ್ಯಾಂಷ್ ಷೆಡ್ಗೆ (Suryansh Shedge) 35, ಮಾರ್ಕಸ್ ಸ್ಟೋಯ್ನಿಸ್ (Marcus Stoinis) 37 ಹಾಗೂ ಶಶಾಂಕ್ ಸಿಂಗ್ (Shashank Singh) 56 ರನ್ ಗಳಿಸಿ ಹೋರಾಟ ನಡೆಸಿದರು. ಆದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ನಿಗದಿತ 20 ಓವರ್‌ಗಳಲ್ಲಿ ಪಂಜಾಬ್ 8 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಆರ್‌ಸಿಬಿ 23 ರನ್‌ಗಳ ಗೆಲುವು ದಾಖಲಿಸಿತು.

ಈ ಜಯದೊಂದಿಗೆ ಐಪಿಎಲ್ 2026 ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಕೀರ್ತಿಗೂ ಆರ್‌ಸಿಬಿ ಪಾತ್ರವಾಯಿತು.

Author

ANU News

Follow Me
Other Articles
Previous

ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

Next

ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme