Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

By ANU News
August 3, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಆಗಸ್ಟ್ 7ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು ಮತ್ತು ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಉತ್ತಮ ಮಳೆಯ ನಿರೀಕ್ಷೆಯಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಅದೇ ರೀತಿ, ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಶಾಲೆಗಳಿಗೂ ಇಂದು ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.

Author

ANU News

Follow Me
Other Articles
Previous

PM-AJAY covers 47,328 villages across India; over 3.28 lakh development works identified

Next

Heavy Rain Likely Across Karnataka for Three More Days; Red Alert in Malnad

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;
    • HAL hands over Tejas trainers, HTT-40 aircraft and Dhruv NG helicopters
    • ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ
    • ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್
    • President appoints 14 judicial officers as judges, additional judges in four high courts
    Copyright 2026 — ANU News. All rights reserved. Blogsy WordPress Theme