Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

By Anu News
June 2, 2026 1 Min Read
0

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಪಂಚಮಸಾಲಿ ಲಿಂಗಾಯಿತ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕು ಹಾಗೂ ಯುವ ಶಾಸಕ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಒತ್ತಾಯಿಸಿದೆ.

ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಹಾಗೂ ವಿಜಯಾನಂದ್ ಕಾಶಪ್ಪನವರ್ ಅಭಿಮಾನಿ ಬಳಗದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬೇಡಿಕೆ ಮುಂದಿರಿಸಲಾಯಿತು.

ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ಡಿಂಡೂರ ಮಾತನಾಡಿ, ರಾಜ್ಯದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ ಜನಸಂಖ್ಯೆ ಒಂದು ಕೋಟಿಗೂ ಅಧಿಕವಿದ್ದು, ಕೃಷಿ ಆಧಾರಿತ ಸಮುದಾಯವಾಗಿ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಆದಾಗ್ಯೂ, ಹಲವು ಸರ್ಕಾರಗಳಲ್ಲಿ ಸಮುದಾಯಕ್ಕೆ ಸಮರ್ಪಕ ಆದ್ಯತೆ ಸಿಕ್ಕಿಲ್ಲ ಎಂಬ ಬೇಸರವಿದೆ ಎಂದು ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ ಒಂದು ಉಪಮುಖ್ಯಮಂತ್ರಿ ಹುದ್ದೆ ಹಾಗೂ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದ ಅವರು, ಯುವ ನಾಯಕ ವಿಜಯಾನಂದ್ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಹೊಸ ತಲೆಮಾರಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿಜಯಾನಂದ್ ಕಾಶಪ್ಪನವರ್ ಅವರ ಕುಟುಂಬ ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲದ ನಂಟು ಹೊಂದಿದೆ. ಅವರ ತಂದೆ-ತಾಯಿ ಶಾಸಕರಾಗಿ ಸೇವೆ ಸಲ್ಲಿಸಿದ್ದು, ಪತ್ನಿ ವೀಣಾ ಕಾಶಪ್ಪನವರ್ ನಾಲ್ಕು ದಶಕಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ. ಅಗತ್ಯವಿದ್ದರೆ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಕೂಡ ಮನವಿ ಸಲ್ಲಿಸಲಾಗುವುದು ಎಂದು ಬಸವರಾಜ್ ಡಿಂಡೂರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರ ಬಿಸರಹಳ್ಳಿ, ಪ್ರಧಾನ ಕಾರ್ಯದರ್ಶಿ ಉಮಾಪತಿ, ಶಿವಕುಮಾರ್ ಬೆಳಗಾಂ, ವೀರೇಶ್, ಎಂ. ಸಿದ್ದೇಶ್ ಬೇಗೂರು, ಹೆಚ್.ಎನ್. ತಿಪ್ಪೇಸ್ವಾಮಿ ಹಾಗೂ ಪಿ.ಡಿ. ಶಿರೂರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Author

Anu News

Follow Me
Other Articles
Previous

ಉಲೇಮಾ, ಧಾರ್ಮಿಕ ಸಿಬ್ಬಂದಿಗೆ ₹50 ಸಾವಿರ ಸಬ್ಸಿಡಿ: ತಮಿಳುನಾಡು ಸರ್ಕಾರದಿಂದ ಅರ್ಜಿ ಆಹ್ವಾನ

Next

Panchamasali leaders seek cabinet berth for Vijayanand Kashappanavar in new Karnataka government

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Priyank Kharge questions Centre’s ethanol policy: ‘Who gets subsidy, who benefits?’
    • ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’
    • Car accident near Hiriyur: Davangere MLA Samarth Shamanur escapes unhurt
    • ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು
    • KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್
    Copyright 2026 — ANU News. All rights reserved. Blogsy WordPress Theme