Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ವಿಜಯೇಂದ್ರ ಮೊದಲು ತಮ್ಮ ನಾಯಕರ ವಿರುದ್ಧದ ಆರೋಪಗಳಿಗೆ ಉತ್ತರಿಸಲಿ; ಬಿ.ಕೆ. ಹರಿಪ್ರಸಾದ್ ತಿರುಗೇಟು

By ANU News
July 11, 2026 1 Min Read
0

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಆರೋಪ ಮಾಡುವ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರ ಮೇಲಿರುವ ಆರೋಪಗಳಿಗೆ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ಇತ್ತೀಚಿನ ಹೇಳಿಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಇತ್ತೀಚೆಗೆ ವಿಜಯೇಂದ್ರ ಅವರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಟೀಕೆ ಮಾಡಿದ್ದಾರೆ. ಆದರೆ ಲಂಚ ಪ್ರಕರಣದಲ್ಲಿ ಜೈಲು ಸೇರಿರುವ ಇತಿಹಾಸ ಹೊಂದಿರುವವರು ಅವರ ತಂದೆ ಬಿ.ಎಸ್. ಯಡಿಯೂರಪ್ಪ. ಅಂತಹವರು ಕಾಂಗ್ರೆಸ್‌ಗೆ ನೈತಿಕತೆಯ ಪಾಠ ಹೇಳುವುದು ಸರಿಯಲ್ಲ ಎಂದು ಹರಿಪ್ರಸಾದ್ ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದಲ್ಲಿದ್ದು, ಅದು ಕಂಪನಿ ಕಾಯ್ದೆಯಡಿ ನೋಂದಾಯಿತ ಸಂಸ್ಥೆ. ಅದರ ಆಸ್ತಿಯನ್ನು ವೈಯಕ್ತಿಕವಾಗಿ ಬಳಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಎಸ್‌ಐಆರ್ (Special Intensive Revision) ಪ್ರಕ್ರಿಯೆ ಕುರಿತು ಮಾತನಾಡಿದ ಹರಿಪ್ರಸಾದ್, ಅಧಿಕಾರಿಗಳ ಕೊರತೆಯಿಂದ ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು. ನ್ಯಾಯಾಲಯದ ನಿರ್ದೇಶನದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅಗತ್ಯ ಕ್ರಮಗಳು ಕೈಗೊಳ್ಳಬೇಕಿದ್ದು, ಮತದಾರರ ಪಟ್ಟಿಯ ಕುರಿತು ಇನ್ನೂ ಸ್ಪಷ್ಟತೆ ಇಲ್ಲ ಎಂದು ಹೇಳಿದರು.

ಶಾಶ್ವತ ನಿವಾಸಿ ಪ್ರಮಾಣಪತ್ರ ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕವು ಬಾಂಗ್ಲಾದೇಶದ ಗಡಿಯನ್ನು ಹಂಚಿಕೊಂಡಿಲ್ಲ. ಅಕ್ರಮ ವಲಸಿಗರು ರಾಜ್ಯಕ್ಕೆ ಬಂದಿದ್ದರೆ ಅದರ ಹೊಣೆ ಕೇಂದ್ರ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವಾಲಯದ ಮೇಲಿದೆ ಎಂದು ಕಿಡಿಕಾರಿದರು.

ಧಾರವಾಡ ಶಾಸಕ ಸ್ಥಾನಕ್ಕೆ ಸಂಬಂಧಿಸಿದ ವಿನಯ್ ಕುಲಕರ್ಣಿ ಅವರ ಅರ್ಜಿ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ನ್ಯಾಯಾಲಯದ ತೀರ್ಪಿಗಾಗಿ ಕಾಯುವುದಾಗಿ ಹೇಳಿದರು.

ಮೂಡಿಗೆರೆ ಪ್ರದೇಶದ ಬೆಳವಣಿಗೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಲಿ ಯಾವುದೇ ಪರ-ವಿರೋಧದ ಬೆಳವಣಿಗೆಗಳಿಲ್ಲ. ಕೆಲವು ಸಂಘಟನೆಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ನಿಯಂತ್ರಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

Author

ANU News

Follow Me
Other Articles
Previous

Mother, Two Sons Killed in Road Accident Near Vijayapura, Karnataka

Next

Hariprasad Counters Vijayendra, Demands Answers on Allegations Against BJP Leaders

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Priyank Kharge questions Centre’s ethanol policy: ‘Who gets subsidy, who benefits?’
    • ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’
    • Car accident near Hiriyur: Davangere MLA Samarth Shamanur escapes unhurt
    • ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು
    • KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್
    Copyright 2026 — ANU News. All rights reserved. Blogsy WordPress Theme