Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
Others

ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆತ; ಹರಿಪ್ರಸಾದ್ ಖಂಡನೆ

By ANU News
June 28, 2026 1 Min Read
0

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಸಾರ್ವಜನಿಕವಾಗಿ ವಿರೋಧ ಪಕ್ಷದವರು ಚಪ್ಪಲಿ ಎಸೆದಿರುವ ಕೃತ್ಯವನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಖಂಡಿಸಿದ್ದಾರೆ.

ಘರಾಣೆ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ಕೆ.ಹರಿಪ್ರಸಾದ್, ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ವಾದದಿಂದ ಎದುರಿಸಲಾಗದವರು, ಪ್ರಜಾಪ್ರಭುತ್ವದ ಭಾಷೆಯಲ್ಲಿ ಉತ್ತರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಮತ್ತು ಹೇಡಿತನದ ಕೃತ್ಯಗಳಿಗೆ ಇಳಿಯುತ್ತಾರೆ ಎಂದಿದ್ದಾರೆ.

ಭಿನ್ನಮತವನ್ನು ಹಿಂಸೆ, ಬೆದರಿಕೆ ಮತ್ತು ಅವಮಾನದಿಂದ ಹತ್ತಿಕ್ಕಲು ಹೊರಟಿರುವ ರಾಜಕೀಯ ಸಂಸ್ಕೃತಿಗೆ ಕರ್ನಾಟಕದಲ್ಲಿ ಯಾವುದೇ ಸ್ಥಾನವಿಲ್ಲ. ಜನರ ತೀರ್ಪಿಗೆ ಗೌರವ ಕೊಡುವ ಪ್ರಜಾಪ್ರಭುತ್ವದಲ್ಲಿ ಇಂತಹ ದುಷ್ಕೃತ್ಯಗಳಿಗೆ ಯಾವುದೇ ಸಮರ್ಥನೆ ಇಲ್ಲ ಎಂದವರು ಹೇಳಿದ್ದಾರೆ.

ಪ್ರದೀಪ್ ಈಶ್ವರ್ ಅವರು ಎದೆಗುಂದಬೇಕಿಲ್ಲ. ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ಸತ್ಯ, ಪ್ರಜಾಪ್ರಭುತ್ವ ಮತ್ತು ಜನರ ಪರವಾದ ಧ್ವನಿಯನ್ನು ಇಂತಹ ಕೃತ್ಯಗಳಿಂದ ಯಾರೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ಬಿ.ಕೆ.ಹರಿಪ್ರಸಾದ್ ಧಿರ್ಯ ತುಂಬಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕರಾದ ಶ್ರೀ @pnimmodige ಪ್ರದೀಪ್ ಈಶ್ವರ್ ಅವರ ಮೇಲೆ ಸಾರ್ವಜನಿಕವಾಗಿ ವಿರೋಧ ಪಕ್ಷದವರು ಚಪ್ಪಲಿ ಎಸೆದು ನಡೆಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ.

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ವಾದದಿಂದ ಎದುರಿಸಲಾಗದವರು, ಪ್ರಜಾಪ್ರಭುತ್ವದ ಭಾಷೆಯಲ್ಲಿ ಉತ್ತರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಮತ್ತು… pic.twitter.com/PUh57S6y2R

— Hariprasad.B.K. (@HariprasadBK2) June 27, 2026

Author

ANU News

Follow Me
Other Articles
Previous

Char Dham helicopter services complete first phase without incidents

Next

Hariprasad Condemns Slipper-Throwing Incident at MLA Pradeep Easwar

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ದರ್ಶನ್’ಗೆ ಸಂಕಷ್ಟ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ14 ಪ್ರದೋಷ್ ಮಾಫಿ ಸಾಕ್ಷಿ
    • Ahead of ‘Toxic’ release, Yash offers prayers at Dharmasthala, Ujire
    • Darshan case: Accused No. 14 Pradosh turns approver, court allows plea
    • ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ
    • Karnataka plans cloud seeding to tackle rain deficit; ₹27 crore project
    Copyright 2026 — ANU News. All rights reserved. Blogsy WordPress Theme