Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

By ANU News
May 1, 2026 1 Min Read
0

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸಚಿವರು ಈ ಮಾಹಿತಿ ನೀಡಿದರು.

ಬೌರಿಂಗ್‌ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ. ಪಾಟೀಲ್‌ ತಿಳಿಸಿದರು.

ಬೌರಿಂಗ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ತಜ್ಞರ ತಂಡ ಪರಿಶೀಲನೆ ನಡೆಸಲು ಆದೇಶಿಸಲಾಗಿದೆ ಎಂದು ವಿವರಿಸಿದರು.

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಮೃತಪಟ್ಟವರಿಗೆ ಮುಖ್ಯಮಂತ್ರಿಗಳು ಈಗಾಗಲೇ ರೂ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ವೈದ್ಯರಿಗೆ ತಿಳಿಸಲಾಗಿದೆ. ಮುಂದೆ ಈ ರೀತಿಯ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

Author

ANU News

Follow Me
Other Articles
Previous

ಮಹಿಳಾ SHGಗಳಿಗೆ ಹೊಸ ಅವಕಾಶ: IPPB ಉಳಿತಾಯ ಖಾತೆ ಆರಂಭ

Next

Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್‌ಫೋನ್ ಕುತೂಹಲ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
    • Four members of Hindu family murdered in Bangladesh
    • Piyush Goyal to lead 200-member business delegation to Japan to boost trade, investment ties
    • ಕಾನೂನು ಸುವ್ಯವಸ್ಥೆ ವೈಫಲ್ಯ; ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ ಎಂದ ಬಿಜೆಪಿ
    • ‘Law and order has collapsed in Karnataka’: BJP demands Priyank Kharge’s resignation
    Copyright 2026 — ANU News. All rights reserved. Blogsy WordPress Theme